ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

ಸಾವಿನಲ್ಲೂ ಸಾರ್ಥಕತೆ... ಆರು ಜನರ ಬಾಳಿಗೆ ಬೆಳಕಾದ ದರ್ಶನ್‌

Published : Jan 21, 2022, 06:20 PM IST

ಮೈಸೂರಿನಿಂದ ಚೆನ್ನೈಗೆ ಜೀವಂತ ಹೃದಯ ರವಾನೆ

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಹೃದಯವನ್ನು  ದಾನ ಮಾಡಲಾಗಿದ್ದು,  ನಗರದ ಬಿಜಿಎಸ್ ಅಪೋಲೊ ಆಸ್ಪತ್ರೆಯಿಂದ ಚೆನ್ನೈಗೆ ಜೀವಂತ ಹೃದಯವನ್ನು ರವಾನೆ ಮಾಡಲಾಗಿದೆ. 24 ವರ್ಷದ ದರ್ಶನ್ ಎಂಬ ಯುವಕ ಜ.18ರಂದು ರಸ್ತೆ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಅಪಘಾತದ ರಭಸಕ್ಕೆ ಯುವಕನ ಬ್ರೈನ್‌ ಡೆಡ್ ಆಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಯುವಕನ ಮನೆಯವರು ಅಂಗಾಂಗ ದಾನಕ್ಕೆ ಮುಂದಾಗಿದ್ದು,  ದರ್ಶನ್‌ ಹೃದಯವನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಮೂಲಕ ಚೆನ್ನೈಗೆ ಏರ್ ಲಿಫ್ಟ್ ಮಾಡಲಾಯಿತು. 

ಚೆನ್ನೈನ ಎಂ.ಜಿ.ಎಂ ಹೆಲ್ತ್ ಕೇರ್‌ಗೆ ಈ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಇದಕ್ಕಾಗಿ ಆಂಬುಲೆನ್ಸ್ ತೆರಳಲು ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿತ್ತು. ಮೈಸೂರಿನಲ್ಲಿ ವಾಸವಾಗಿದ್ದ ದರ್ಶನ್ ಮೂಲತಃ ಗುಂಡ್ಲುಪೇಟೆಯವರಾಗಿದ್ದರು. ಮೈಸೂರಿನ ಬೆಳವಾಡಿಯಲ್ಲಿ ಎಲೆಕ್ಟ್ರಿಕಲ್ ಕೆಲಸ ನಿರ್ವಹಿಸುತ್ತಿದ್ದ ದರ್ಶನ್‌ಗೆ ಮೂರು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದು, ಎರಡು ತಿಂಗಳ ಮಗುವಿದೆ. ಅಂಗಾಂಗವಲ್ಲದೇ ಕಣ್ಣುಗಳನ್ನು ಹಾಗೂ ದೇಹದ ಇತರ ಭಾಗಗಳನ್ನು ಕೂಡ ದಾನ ಮಾಡಿರುವ ದರ್ಶನ್‌  ಆರು ಜನರ ಬಾಳಿಗೆ ಬೆಳಕಾಗಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more