Nov 8, 2022, 4:37 PM IST
ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಈ ವಿಚಾರವಾಗಿ ಸತೀಶ್ ಜಾರಕಿಹೊಳಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಬಿಎಸ್‌ವೈ ಆಗ್ರಹಿಸಿದ್ದಾರೆ. ಹಿಂದೂಗಳಿಗೆ ಅವಮಾನದ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ, ಸತೀಶ್ ಜಾರಕಿಹೊಳಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು ದೊಡ್ಡವನಾಗುತ್ತೇನೆ ಎಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು ಎಂದರು.