ಇಂದಿನಿಂದ ಬೆಂಗಳೂರಿನಲ್ಲಿ ಕನೆಕ್ಟ್ ಕರ್ನಾಟಕ ಎಕ್ಸ್‌ಪೋ ಕಾರ್ಯಕ್ರಮ ನಡೆಯಲಿದ್ದು, ಪ್ರತಿಷ್ಠಿತ ಕಂಪನಿಗಳು ಎಕ್ಸ್‌ಪೋದಲ್ಲಿ ಭಾಗಿಯಾಗಲಿವೆ.
ಇಂದಿನಿಂದ ಬೆಂಗಳೂರಿನಲ್ಲಿ ನಡೆಯುವ ಕರ್ನಾಟಕ ಎಕ್ಸ್‌ಪೋಗೆ ಸಚಿವ ಅಶ್ವತ್ಥ್ ನಾರಾಯಣ್ ಚಾಲನೆ ನೀಡಲಿದ್ದಾರೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವಿವಿಧ ವಲಯಗಳ ಪ್ರತಿಷ್ಠಿತ ಕಂಪನಿಗಳು ಎಕ್ಸ್‌ಪೋದಲ್ಲಿ ಭಾಗಿಯಾಗಲಿವೆ. ಏಷ್ಯಾನೆಟ್ ಸೂವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ಆಯೋಜನೆ ಮಾಡಿರುವ ಕಾರ್ಯಕ್ರಮದಲ್ಲಿ ಗ್ರಾಹಕರಿಗೆ ತಜ್ಞರು ಹಾಗೂ ಸಲಹೆಗಾರರು ಮಾಹಿತಿ ನೀಡಲಿದ್ದಾರೆ. ಎಕ್ಸ್‌ಪೋದಲ್ಲಿ ಭಾಗಿಯಾಗುವವರಿಗೆ ಬೈಕ್ ಗೆಲ್ಲುವ ಅವಕಾಶವಿದ್ದು, ಲಕ್ಕಿಡಿಪ್ ಮೂಲಕ ವಿಜೇತರಿಗೆ ಎಲೆಕ್ಟ್ರಿಕ್ ಬೈಕ್ ವಿತರಣೆ ಮಾಡಲಾಗುತ್ತದೆ.