ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

ಡಿಕೆಶಿ ಕಾರ್ಯಕ್ರಮದಲ್ಲಿ ಕಟೌಟ್ ರಾಜಕಾರಣ: ಸಿದ್ದು ಅಭಿಮಾನಿಗಳು ಗರಂ ಆಗಿದ್ದೇಕೆ..?

Published : Jul 18, 2021, 01:42 PM IST

* ಎಲ್ಲೆಲ್ಲೂ ರಾರಾಜಿಸಿದ ಡಿಕೆಶಿ ಬ್ಯಾನರ್, ಕಾಣದ ಸಿದ್ದರಾಮಯ್ಯ ಕಟೌಟ್
* ನೇಕಾರ ಸಮಸ್ಯೆಗಳ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ
* ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಪ್ರತ್ಯಕ್ಷ 
 

ಬಾಗಲಕೋಟೆ(ಜು.18): ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋದಕಡೆಯಲ್ಲಾ ಡಿಕೆಶಿ ಬ್ಯಾನರ್ ರಾರಾಜಿಸುತ್ತಿದೆ. ಆದರೆ, ಎಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಎಲ್ಲೂ ಕಾಣಿಸುತ್ತಿಲ್ಲ. ಹೌದು, ಜಿಲ್ಲೆಯ ಬನಹಟ್ಟಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನೇಕಾರರ ಜೊತೆಗೆ ಡಿಕೆಶಿ ಸಂವಾದ ಕಾರ್ಯಕ್ರಮ ನಡೆದಿದೆ. ಕಲ್ಯಾಣ ಮಂಟಪದ ಬಳಿ ಸಿದ್ದರಾಮಯ್ಯನವರ ಕಟೌಟ್ ಮಾತ್ರ ಕಾಣಿಸುತ್ತಿಲ್ಲ.  ಸಿದ್ದು ಅಭಿಮಾನಿಗಳ ಆಕ್ಷೇಪದ ಬೆನ್ನಲ್ಲೇ ಸಿದ್ದರಾಮಯ್ಯ ಕಟೌಟ್ ದಿಢೀರ್ ಅಂತ ಪ್ರತ್ಯಕ್ಷವಾಗಿದೆ. ಆಕ್ಷೇಪದ ಬಳಿಕ ಕಲ್ಯಾಣ ಮಂಟಪದ ಮುಖ್ಯ ದ್ವಾರದಲ್ಲಿ ಡಿಕೆ ಶಿವಕುಮಾರ್, ಸಿದ್ದು ಬ್ಯಾನರ್ ಹಾಕಲಾಗಿದೆ. ಮಾಧ್ಯಮಗಳ ಮೂಲಕ ಗಮನಿಸಿದ ಕಾರ್ಯಕರ್ತರು ಸಿದ್ದರಾಮಯ್ಯನವರ ಕಟೌಟ್ ತಂದಿಟ್ಟಿದ್ದಾರೆ. 

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!