ಮಂಗಳೂರಿನಲ್ಲಿ ಭುಗಿಲೆದ್ದ ಮತ್ತೊಂದು ವಿವಾದ: ದಸರಾ ದಾಂಡಿಯಾ ನೈಟ್ಸ್‌ಗೆ ಹಿಂದೂ ಸಂಘಟನೆಗಳ ಕಿಡಿ

ಮಂಗಳೂರಿನಲ್ಲಿ ಭುಗಿಲೆದ್ದ ಮತ್ತೊಂದು ವಿವಾದ: ದಸರಾ ದಾಂಡಿಯಾ ನೈಟ್ಸ್‌ಗೆ ಹಿಂದೂ ಸಂಘಟನೆಗಳ ಕಿಡಿ

Published : Oct 21, 2023, 10:55 AM IST

ವ್ಯಾಪಾರ ದಂಗಲ್ ಬಳಿಕ ಮಂಗಳೂರಿನಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ನವರಾತ್ರಿ ಸಂದರ್ಭ ಧಾಮ್ ಧೂಮ್ ಆಗಿ ನಡೆಯುವ ದಾಂಡಿಯಾ ನೈಟ್ಸ್ ಇವೆಂಟ್ ಗಳಿಗೆ  ಕಡಿವಾಣ ಹಾಕಬೇಕು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದೆ.
 

ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆ ಪಟ್ಟಿ ಹೊತ್ತಿರುವ ಕಡಲನಗರಿ ಮಂಗಳೂರು(Mangaluru) ನವರಾತ್ರಿ ಸಂದರ್ಭದಲ್ಲಿ ಒಂದಲ್ಲ ಒಂದು ವಿವಾದಗಳಿಂದ ಸದ್ದು ಮಾಡುತ್ತಿದೆ. ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ದಂಗಲ್ ಹಾಗೂ ಧ್ವಜ ವಿವಾದದ ಬಳಿಕ ಇದೀಗ ಮತ್ತೊಂದು ವಿವಾದ ಭುಗಿಲೆದ್ದಿದೆ. ನವರಾತ್ರಿ ಪ್ರಯುಕ್ತ ನಗರ ಹಲವು ಪ್ರತಿಷ್ಠಿತ ಹೋಟೆಲ್, ಮಾಲ್ ಗಳಲ್ಲಿ ಧಾಮ್ ಧೂಮ್ ಆಗಿ ನಡೆಯುವ ಉತ್ತರ ಭಾರತ ದಾಂಡಿಯಾ ಶೈಲಿಯ ದಾಂಡಿಯಾ ನೈಟ್ಸ್ ಇವೆಂಟ್ ಗಳು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಣ್ಣು ಕೆಂಪಾಗಾಗಿಸಿದ್ದು, ದಾಂಡಿಯಾ ನೈಟ್ಸ್ ಇವೆಂಟ್ಸ್ಗೆ(Dasara Dandiya dance event) ಅನುಮತಿ ನೀಡದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡಿದೆ. ನವರಾತ್ರಿ ಸಂದರ್ಭ ಉತ್ತರ ಭಾರತದಲ್ಲಿ(North India) ಗರ್ಭ ಹೆಸರಿನಲ್ಲಿ ನಡೆಯುವ ದಾಂಡಿಯಾ ನೃತ್ಯ ಪವಿತ್ರ ಧಾರ್ಮಿಕ ಕಾರ್ಯಕ್ರಮವಾಗಿದೆ. ಆದ್ರೆ ಪ್ರಸ್ತುತ ವರ್ಷಗಳಲ್ಲಿ ನಗರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ, ಡ್ರಗ್ಸ್, ಮಾದಕ ದ್ರವ್ಯ ಸೇವನೆ ಮತ್ತು ಅಸಭ್ಯ ನೃತ್ಯಗಳ ಬಗ್ಗೆ ದೂರುಗಳು ಬಂದಿದ್ದು, ಈ ನಿಟ್ಟಿನಲ್ಲಿ ದಾಂಡಿಯಾ ನೈಟ್ಸ್ ಗೆ ಅವಕಾಶ ನೀಡಬಾರದು ಎಂದು ಬಜರಂಗದಳ ಮನವಿ ಮಾಡಿತ್ತು.‌ ದಾಂಡಿಯಾ ಹೆಸರಿನಲ್ಲಿ ನಡೆಯುವ ಮೋಜು ಮಸ್ತಿಯ ಇವೆಂಟ್ಗಳಿಗೆ ಅವಕಾಶ ನೀಡಿದ್ರೆಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ.ಈ ನಡುವೆ ಇನ್ನೆರಡು ದಿನ ಮಂಗಳೂರಿನ ಸುಮಾರು 20ಕ್ಕೂ ಅಧಿಕ ಪ್ರದೇಶದಲ್ಲಿ ದಾಂಡಿಯಾ ನೈಟ್ಸ್ ಆಯೋಜನೆಗೊಂಡಿದೆ. 

ಇದನ್ನೂ ವೀಕ್ಷಿಸಿ:  15ನೇ ದಿನವೂ ರಣರಂಗದಲ್ಲಿ ಇಸ್ರೇಲ್ ಗುಂಡಿನ ಮಳೆ: ಗಾಜಾದ ಮತ್ತೊಂದು ಮಸೀದಿ ಉಡೀಸ್‌

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!