Jul 29, 2020, 5:38 PM IST
ದಾವಣಗೆರೆ(ಜು.29): ಕೊರೋನಾ ಸಂಕಷ್ಟಪರಿಸ್ಥಿತಿಯಲ್ಲಿ ಸರ್ಕಾರದ ಸೂಚನೆ ಪಾಲಿಸುವ ಮೂಲಕ ಬಕ್ರೀದ್ ಆಚರಣೆ ವೇಳೆ ಪ್ರತಿಯೊಬ್ಬರೂ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟ ಹನುಮಂತರಾಯ ಮನವಿ ಮಾಡಿದರು. ಎಸ್ಪಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಾಗರಿಕ ಶಾಂತಿ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಬಾರಿ ಬಕ್ರೀದ್ ಶಾಂತಿಯುತವಾಗಿ ನಡೆದಿದ್ದು, ಈ ಸಲವೂ ಶಾಂತಿಯುತ ಆಚರಣೆಗೆ ಎಲ್ಲಾ ಸಮುದಾಯಗಳೂ ಕೈಜೋಡಿಸಬೇಕು ಎಂದರು. ಈದ್ಗಾ ಮೈದಾನದಲ್ಲಿ ಈ ಬಾರಿ ಪ್ರಾರ್ಥನೆ ಮಾಡುವಂತಿಲ್ಲ. ತೆರೆದ ಸ್ಥಳದಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಮಸೀದಿಗಳಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರದ ನಿಯಮಗಳನ್ನು ಕಡ್ಡಾಯ ಪಾಲಿಸಬೇಕು ಎಂದು ಹೇಳಿದರು.
ಜುಲೈ 30ರಿಂದ ಕೊಪ್ಪದ ಮಸೀದಿಗಳಲ್ಲಿ ನಮಾಜ್ ಶುರು
60 ವರ್ಷಕ್ಕಿಂತ ಮೇಲ್ಪಟ್ಟವ್ಯಕ್ತಿಗಳು ಹಾಗೂ 10 ವರ್ಷದೊಳಗಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ನಮಾಜ್ ಮಾಡುವವರು ತಮ್ಮ ಮಧ್ಯೆ ಕನಿಷ್ಟ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿ ಪ್ರವೇಶಕ್ಕೆ ಮುನ್ನ ದೇಹದ ತಾಪಮಾನ ತಪಾಸಣೆ ಮಾಡಬೇಕು. ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್‌ನಿಂದ ಶುಚಿಗೊಳಿಸಿಕೊಳ್ಳಬೇಕು ಎಂಬುದಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸಲು ತಿಳಿಸಿದರು.