Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Covid 19 Spike: ಕೊಪ್ಪಳದ 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

Published : Jan 25, 2022, 09:39 AM IST

*ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಸ್ಪೋಟ
* 9 ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
*100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್‌ 19
 

ಕೊಪ್ಪಳ (ಜ. 25): ರಾಜ್ಯದಲ್ಲಿ ಕೊರೋನಾ(Covid 19)ಸೋಂಕು ತೀವ್ರಗೊಳ್ಳುತ್ತಿದ್ದು, 3ನೇ ಅಲೆಯಲ್ಲಿಯೇ ಅತಿ ಹೆಚ್ಚು 32 ಸಾವು, ಅತಿ ಹೆಚ್ಚು ಪಾಸಿಟಿವಿಟಿ ದರ ಶೇ.33 ಸೋಮವಾರ ದಾಖಲಾಗಿದೆ. ಅಲ್ಲದೆ, ಬರೋಬ್ಬರಿ 16 ಜಿಲ್ಲೆಗಳಲ್ಲಿ ಸೋಂಕಿತರ ಸಾವು ವರದಿಯಾಗಿದೆ. ಈ ಮಧ್ಯೆ ಕೊಪ್ಪಳದಲ್ಲಿ (Koppal) ವಿವಿಧ ಶಾಲಾ ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ ಜಿಲ್ಲೆಯ 9 ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ದೃಡಪಟ್ಟಿದೆ. 

ಇದನ್ನೂ ಓದಿ: Corona Cases 3ನೇ ಅಲೆಯಲ್ಲೇ ಗರಿಷ್ಠ: ಕರ್ನಾಟಕದಲ್ಲಿ 32 ಸಾವು, ಶೇ.33 ಪಾಸಿಟಿವಿಟಿ!

ಜನವರಿ 22ರಿಂದ ಜನವರಿ 26ರ ವರೆಗೆ 9 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೋವಿಡ್‌ ಸೋಂಕು ದೃಡಪಟ್ಟ ವಿದ್ಯಾರ್ಥಿಗಳನ್ನು ನಗರದ ಹೊರವಲಯದಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲಾಗಿದೆ. ಇನ್ನು ರಾಜ್ಯದಲ್ಲಿ(Karnataka) ಸೋಮವಾರ 46,426 ಮಂದಿ ಸೋಂಕಿತರಾಗಿದ್ದು, ಹಾವೇರಿಯಲ್ಲಿ(Haveri) 10 ವರ್ಷದ ಬಾಲಕಿ ಸೇರಿ 32 ಸೋಂಕಿತರು ಸಾವಿಗೀಡಾಗಿದ್ದಾರೆ. 41,703 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3.16 ಲಕ್ಷ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more