Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Mangaluru: ಕಾರಿಂಜೇಶ್ವರ ಸುತ್ತ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತದಿಂದ ಬ್ರೇಕ್

Suvarna News   | Asianet News
Published : Mar 04, 2022, 04:58 PM ISTUpdated : Mar 04, 2022, 05:45 PM IST

ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 
 

ದಕ್ಷಿಣ ಕನ್ನಡ (ಮಾ. 04):  ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನ ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲಿ ಒಂದು. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಇರುವ ಈ ಕಾರಣಿಕ ದೇವಸ್ಥಾನದ ಆಸುಪಾಸಿನಲ್ಲಿ ಅಕ್ರಮ ಕಪ್ಪು ಕಲ್ಲು ಗಣಿಗಾರಿಕೆ ನಡೆಯುತಿತ್ತು. 

ದೇಗುಲದ ನಾಲ್ಕು ಸುತ್ತಲೂ ಕಲ್ಲು ಗಣಿಗಾರಿಕೆಯ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿತ್ತು. ಸ್ಫೋಟದ ಸಂದರ್ಭ ಭಗವಂತನ ವಿಗ್ರಹವೇ ಕಂಪನ ಆದಂತಾಗುತ್ತಿತ್ತು. ಹೀಗಾಗಿ ಕಾವಳ ಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿದ್ದ ಈ ಕಲ್ಲು ಗಣಿಗಾರಿಕೆ ವಿರುದ್ದ ಸ್ಥಳೀಯರು, ದೇವಸ್ಥಾನದ ಭಕ್ತಾಧಿಗಳು ಬೃಹತ್ ಪ್ರತಿಭಟನೆ, ಹೋರಾಟ ನಡೆಸಿದ್ದರು. ಇದೀಗ ದೂರಿನ ಹಿನ್ನೆಲೆಯಲ್ಲಿ 03 ಕಪ್ಪು ಕಲ್ಲು ಗಣಿಗಾರಿಕೆಗೆ ಜಿಲ್ಲಾಡಳಿತ ಬೀಗ ಜಡಿದಿದೆ.

ಒಂದು ಕಲ್ಲು ಕೋರೆಯಲ್ಲಿ ಪರವಾಣಿಗೆದಾರ ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಜಿಲ್ಲಾಡಳಿತದ ತನಿಖೆ ಸಂದರ್ಭ ಗೊತ್ತಾಗಿತ್ತು. ಹೀಗಾಗಿ 8,12,87,198 ರೂ. ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು, ದಂಡ ಪಾವತಿಸದ ಕಾರಣ ಆ ಗಣಿಗಾರಿಕೆಯನ್ನು ಬಂದ್ ಮಾಡಲಾಗಿದೆ. 

ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಹ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಪರವಾನಿಗೆದಾರ ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಗುತ್ತಿಗೆದಾರ ಮೃತಪಟ್ಟಿದ್ದರು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿದೆ.

ಸದ್ಯ ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ವಹಿಸಿದೆ. ಒಟ್ಟಿನಲ್ಲಿ ಇನ್ಮುಂದೆಯಾದ್ರು ಸಾವಿರಾರು ವರ್ಷಗಳ ಇತಿಹಾಸವಿರುವ ದೇವಸ್ಥಾನಕ್ಕೆ ರಕ್ಷಣೆ ಸಿಗಲಿ ಎಂಬುದೇ ನಮ್ಮ ಆಶಯ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more