Dec 13, 2021, 4:37 PM IST
ಚಿಕ್ಕಮಗಳೂರು, (ಡಿ.13); ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ನಿರಂತರವಾಗಿ ನಡೆಯುತ್ತಿದ್ದು ಇದರ ಪರಿಣಾಮ ಕಳೆದ 8-10 ವರ್ಷಗಳಲ್ಲಿ 10-15 ಆನೆಗಳು ಸಾವನ್ನಪ್ಪಿವೆ.
Chamarajnagar ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಸಲಗಗಳ ಅಪರೂಪದ ವಿಡಿಯೋ
ಹೌದು....ಹೊಲ-ಗದ್ದೆಗಳಲ್ಲಿ ಬೆಳೆ ನಾಶ ಮಾಡುತ್ತವೆ ಎಂದು ರೈತರು ಜಮೀನಿಗೆ ಅಳವಡಿಸಿರುವ ವಿದ್ಯುತ್ ತಂತಿಗೆ ಸಿಕ್ಕಿ ಅವುಗಳು ಪ್ರಾಣ ಕಳೆದುಕೊಳ್ತಿವೆ. ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ನಿರಂತರವಾಗಿ ನಡೆಯುತ್ತಿದೆ. ಈ ಸಂಘರ್ಷಕ್ಕೆ ಪರಿಹಾರ ಒದಗಿಸುವಂತೆ ರೈತರು, ಸಾಕಷ್ಟು ಭಾರೀ ಸರ್ಕಾರದ ಗಮನ ಸೆಳೆದರು. ಸರ್ಕಾರದ ದಿವ್ಯನಿರ್ಲಕ್ಷತನದಿಂದ ವನ್ಯಪ್ರಾಣಿಗಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿವೆ. ಮಾನವ-ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ...