Aug 12, 2022, 10:06 AM IST
ಬಳ್ಳಾರಿ/ವಿಜಯನಗರ(ಆ.12): ರಾಜ್ಯದ ಹಲವಡೆ ಮಾಹಾಮಳೆ ಸುರಿಯುತ್ತಿದೆ. ಹೀಗಾಗಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಬಳ್ಳಾರಿ ಪ್ರವಾಹ ಭೀತಿ ಎದುರಾಗಿದೆ. ತುಂಗಭದ್ರಾ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಹರಿಬಿಡಲಾಗಿದೆ. ಹೀಗಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದೆ. ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿದ್ದರಿಂದ ಕಂಪ್ಲಿ ಮೀನುಗಾರರ ಕಾಲೋನಿವರೆಗೂ ನೀರು ಬಂದಿದೆ. ಐತಿಹಾಸಿಕ ಕೋಟೆ ಆಂಜನೇಯ ದೇವಸ್ಥಾನ ಜಲಾವೃತವಾಗಿದೆ. ದೇವಸ್ಥಾನ ಗರ್ಭಗುಡಿಗೆ ನೀರು ನುಗ್ಗಿದೆ. ಕಳೆದ ನಾಲ್ಕು ದಿನಗಳಿಂದ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ.
ಕರ್ನಾಟಕ ಲೋಕಾಯುಕ್ತಕ್ಕೆ ಫುಲ್ ಪವರ್, ಹೈಕೋರ್ಟ್ ಆದೇಶಕ್ಕೆ ಸಿದ್ದು ಪಂಚರ್!