Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Shivamogga: ದೇವಸ್ಥಾನ ಉಳಿಸಲು ಹೋರಾಡಿದ ನಾಗರ ಹಾವು ಕೊಂದವರ ವಿರುದ್ಧ FIR

Published : Dec 11, 2021, 01:40 PM ISTUpdated : Dec 11, 2021, 02:14 PM IST

ಶಿವಮೊಗ್ಗ (Shivamogga) ಎಪಿಎಂಸಿ ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City) ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ. 

ಶಿವಮೊಗ್ಗ (ಡಿ. 11):  ಎಪಿಎಂಸಿ (APMC) ರಸ್ತೆಯಲ್ಲಿ 40 ವರ್ಷ ಇತಿಹಾಸ (History) ಹೊಂದಿರುವ ಪುರಾತನ ಆಂಜನೇಯ ಸ್ವಾಮಿ  ದೇಗುಲವೊಂದಿತ್ತು. ಶಿವಮೊಗ್ಗ ಸ್ಮಾರ್ಟ್ ಸಿಟಿ (Smart City)ರಸ್ತೆ ಅಗಲೀಕರಣ ನೆಪದಲ್ಲಿ ಈ ದೇಗುಲ ತೆರವುಗೊಳಿಸಲು ಸ್ಥಳೀಯ ಆಡಳಿತ ಮುಂದಾಗಿದೆ.

ಜೆಸಿಬಿಯಿಂದ ದೇಗುಲ ತೆರವುಗೊಳಿಸಲು ಮುಂದಾದಾಗ ಅಚ್ಚರಿ ಎಂಬಂತೆ, ನಾಗರಹಾವೊಂದು ಅಲ್ಲಿ ಪ್ರತ್ಯಕ್ಷವಾಗಿದೆ. ಜೆಸಿಬಿ ಕೆಲಸ ಮಾಡುವಾಗ ಇದಕ್ಕೆ ಸಮ್ಮತವಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. ಆದರೆ ಸಂಬಂಧಪಟ್ಟವರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ತಮ್ಮ ಕೆಲಸ ಮುಂದುವರೆಸಿದ್ದಾರೆ. ಹೀಗೆ ಕೆಲಸ ಮಾಡುತ್ತಿರುವಾಗ, ನಾಗರಹಾವು ಜೆಸಿಬಿಗೆ ಸಿಲುಕಿ ಸಾವನ್ನಪ್ಪಿತ್ತು. ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು, ಭಜರಂಗದಳ, ವಿಶ್ವ ಹಿಂದೂ ಪರಿಷತ್‌ ದವರು  ಸ್ಥಳೀಯ ಆಡಳಿತದ ವಿರುದ್ಧ, ಕೆಲಸ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವಿಸ್ತೃತವಾದ ವರದಿ ಪ್ರಸಾರ ಮಾಡಿತ್ತು. 

ಶಿವಮೊಗ್ಗ ಸ್ಮಾರ್ಟ್‌ಸಿಟಿ ಇಂಜಿನಿಯರ್‌ ಕೆ.ವಿ.ವಿಜಯಕುಮಾರ್,  ರಾಜ ಕುಮಾರ್ ಮತ್ತು ಜೆಸಿಬಿ ಚಾಲಕ ನಾಗಪ್ಪ ವಿರುದ್ಧ ಅರಣ್ಯ ಇಲಾಖೆ ಶಂಕರ ವಲಯ ವಿಭಾಗದಲ್ಲಿ ಎಫ್ಐಆರ್ ದಾಖಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ ನಂ .9, 31 ಮತ್ತು  51 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more