Jan 16, 2022, 12:17 PM IST
ಹಾಸನ(ಜ.15): ಬೆಂಗಳೂರು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗುವ ಆತಂಕ ಎದುರಾಗಿದೆ. ಹೌದು, ಕಳೆದ ಏಳು ವರ್ಷಗಳಿಂದ ನಿರಂತರವಾಗಿ ರಾಜಕಮಲ್ ನೇತೃತ್ವದಲ್ಲಿ ನಡೆಯುತ್ತಿರುವ ಹಾಸನ ಮಾರನಹಳ್ಳಿ ನಡುವಿನ 40 ಕಿಮಿ ಚತುಷ್ಪಥ ಕಾಮಗಾರಿ ಆಮೆವೇಗದಲ್ಲಿ ನಡೆಯುತ್ತಿದೆ. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದು ವರ್ಷದಿಂದ ಕಾಮಗಾರಿ ಸ್ವಲ್ಪ ವೇಗ ಪಡೆದುಕೊಂಡಿದೆ. ಹಾಸನದಿಂದ ಸಕಲೇಶಪುರದವರೆಗಿನ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಹೀಗಾಗಿ ಶಿರಾಡಿ ಘಾಟ್ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ, ಈ ಕುರಿತು ವಿವರವಾದ ಮಾಹಿತಿ ಈ ವಿಡಿಯೋದಲ್ಲಿದೆ.
Tumakuru: ಹತ್ಯಾಳು ಬೆಟ್ಟದಲ್ಲಿ ದೇವಸ್ಥಾನದ ಎದುರು ನಗ್ನ ವ್ಯಕ್ತಿಯಿಂದ ದಾಂಧಲೆ