Dec 10, 2023, 3:46 PM IST
ಮಂಗಳೂರು: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ(Kalladka Sri Rama Vidyakendra) ನಡೆದ ಕ್ರೀಡೋತ್ಸವದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಮಾತನಾಡಿ, ಹಿಂದೆ ಪ್ರಭಾಕರ್ ಭಟ್(Kalladka Prabhakar Bhatt) ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಕಾರ್ಯಕ್ರಮ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಅವರು ಹೇಳಿದರು. ಇಲ್ಲಿ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಇದು ಸ್ಮರಿಸಿಕೊಳ್ಳುವ ಸಂದರ್ಭವಾಗಿದೆ. ದೇಶದ ಕೀರ್ತಿ ಎತ್ತಿ ಹಿಡಿದ ವಿಜ್ಞಾನಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಿಲಾಗುತ್ತಿದೆ. ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ರೆ ಜೀವನದಲ್ಲಿ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳ ಮೂಲಕ ಮಾಡಿಸಿದ್ದಾರೆ. ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಮಕ್ಕಳಿದ್ದಾಗ ರಾಮನ ಭಜನೆ ಮಾಡಿದ್ದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರದ ಕಣ್ಣು ತೆರೆಸುತ್ತಿದ್ದೀರಿ. ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ರು. ಈಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೀರಲ್ವಾ ಅಂತ ಯೋಚಿಸಿರಬಹುದು. ನನ್ನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು, ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಭಾಷಣದ ಕೊನೆಗೆ ಜೈ ಶೀರಾಮ್ ಘೋಷಣೆಯನ್ನು ಕುಮಾರಸ್ವಾಮಿ ಕೂಗಿದರು.
ಇದನ್ನೂ ವೀಕ್ಷಿಸಿ: 40 ಚುನಾವಣೆಗಳು, 22 ವಿಜಯಗಳು, ಮೋದಿ ನವಾಶ್ವಮೇಧ..! ಜಾಗತಿಕ ನಾಯಕರನ್ನು ಮೀರಿಸಿದ್ದು ಹೇಗೆ ಗಜಕೇಸರಿ..?