ಶತಮಾನಗಳಿಂದ 'ಹೃದಯ'ದಲ್ಲಿ ಅನ್ನ ಬೆಳೆಯುತ್ತಿರುವ ಅನ್ನದಾತ

Jul 30, 2020, 3:04 PM IST

ಚಿಕ್ಕಮಗಳೂರು(ಜು.30): ಇಲ್ಲಿನ ಮೂಡಿಗೆರೆ ತಾಲೂಕಿನ ಸಂಸೆ ಸಮೀಪದ ಬಾಮಿಕೊಂಡ ಗ್ರಾಮದ ರೈತ ಕೃಷ್ಣನ ಭತ್ತದ ಗದ್ದೆ ಈಗ ಪ್ರವಾಸಿ ತಾಣವಾಗಿದೆ. ಅಪ್ಪನ ಕಾಲದಿಂದಲೂ ಅಂದರೆ ಸರಿ ಸುಮಾರು 100ಕ್ಕೂ ಅಧಿಕ ವರ್ಷಗಳಿಂದಲೂ ಕೂಡ ಕೃಷ್ಣ ಹೃದಯದಲ್ಲೇ ಭತ್ತ ಬೆಳೆಯುತ್ತಿದ್ದಾರೆ. 

ತಮ್ಮ ಭತ್ತದ ಗದ್ದೆಗೆ ಹೃದಯದ ಆಕಾರ ನೀಡಿರೋ ಇವ್ರು ಶತಮಾನದಿಂದ ಭೂದೇವಿಯನ್ನ ಹೃದಯದಲ್ಲೆ ಭತ್ತ ಬೆಳೆಯುತ್ತಿದ್ದಾರೆ. ಇದನ್ನ ಇವ್ರು ಶೋಕಿಗಾಗೋ ಅಥವ ಪ್ರಚಾರಕ್ಕಾಗೋ ಮಾಡಿದ್ದಲ್ಲ. ಶತಮಾನಗಳ ಹಿಂದೆ ಯಾವ ಟ್ರ್ಯಾಕ್ಟರ್, ಜೆಸಿಬಿ ಏನೂ ಇರಲಿಲ್ಲ. ಎತ್ತಿನ ಹೆಗಲಿಗೆ ನೊಗ ಕಟ್ಟಿ ಗುಡ್ಡವನ್ನ ಸಮಮಾಡಿ ಮಾಡಿದ ಭತ್ತದ ಗದ್ದೆ ಇದು. 

"ರಾಮನ ಅಸ್ತಿತ್ವವೇ ಇಲ್ಲ ಎಂದಿದ್ದ ಕಾಂಗ್ರೆಸ್", ಇದೀಗ ಭಕ್ತರಾಗಿದ್ದು ಹೇಗೆ? ಬಿಜೆಪಿ ತಿರುಗೇಟು!

ಅಂದಿನಿಂದಲೂ ಇದನ್ನ ಹಾಗೇ ಬಿಟ್ಟಿದ್ದಾರೆ. ಅಲ್ಲೇ ಭತ್ತ ಬೆಳೆಯುತ್ತಿದ್ದಾರೆ. ಆದರೆ, ಸದ್ಯಕ್ಕೆ ಈ ಜಾಗ ಪ್ರವಾಸಿ ತಾಣವಾಗಿದೆ. ಸುತ್ತಲೂ ಹಚ್ಚ ಹಸಿರು. ಮಧ್ಯದಲ್ಲೊಂದು ಗದ್ದೆ. ಗದ್ದೆಯ ಮಧ್ಯದಲ್ಲಿ ಹೃದಯ ಖಾಲಿ ಬಿಟ್ಟಿರೋ ಹೃದಯ ಆಕಾರದ ಜಾಗ. ಇದೀಗ ಆ ಜಾಗವೇ ನೋಡುಗರ ಆಕರ್ಷಣಿಯ ಕೇಂದ್ರ ಬಿಂದುವಾಗಿದೆ. ಈ ಜಾಗವಿರೋದು ಸ್ಥಳಿಯರಿಗೆ ಎಷ್ಟೋ ಜನಕ್ಕೆ ಗೊತ್ತಿರಲಿಲ್ಲ. ಈ ಸುಂದರ ತಾಣದ ಒಂದೆರಡು ಫೋಟೋಗಳು ಹೊರಬೀಳುತ್ತಿದ್ದಂತೆ ಈಗಾಗಲೇ ಸುತ್ತಮುತ್ತಲಿನ ಜಾಗಕ್ಕೆ ಭೇಟಿ ನೀಡೋದಕ್ಕೆ ಶುರುವಿಟ್ಟಿದ್ದಾರೆ.