Hijab Row: ಉಡುಪಿ ಜನರು ಯಾವುದೇ ಆತಂಕಪಡೋದು ಬೇಡ: ಎಸ್‌ಪಿ ವಿಷ್ಣುವರ್ಧನ್ !

Feb 23, 2022, 3:13 PM IST

ಉಡುಪಿ (ಫೆ. 23): ದಕ್ಷಿಣ ಕನ್ನಡದ ಕಾಲೇಜೊಂದರಲ್ಲಿ ಆರಂಭವಾದ ಹಿಜಾಬ್‌ ಗದ್ದಲ ಈಗ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ.  200ಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿ ಉಡುಪಿಯ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ದಾರೆ. "ಉಡುಪಿ ಜನರು ಯಾವುದೇ ಆತಂಕಪಡೋದು ಬೇಡ. ಯಾವುದೇ ಸವಾಲು ಸ್ವೀಕರಿಸಲು ಪೊಲೀಸರು ಸಿದ್ಧ" ಎಂದು ಉಡುಪಿ ಎಸ್‌ಪಿ ವಿಷ್ಣುವರ್ಧನ್ ಸಂದೇಶ ನೀಡಿದ್ದಾರೆ. 

ಇದನ್ನೂ ಓದಿ: Hijab Row: 'ಜನರ ಧಾರ್ಮಿಕ ಭಾವನೆಗಳ ಜೊತೆ ಬಿಜೆಪಿ ಚೆಲ್ಲಾಟ'

ಸದ್ಯ ಹಿಜಾಬ್‌ ಧರಿಸಿ ಕಾಲೇಜು ಪ್ರವೇಶಿಸುವುದನ್ನು ನಿರ್ಬಂಧಿಸಿದ್ದ ಆದೇಶ ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳ  ಮುಖ್ಯನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್‌ ಅವರಿದ್ದ ವಿಸ್ತೃತ ಪೀಠ ವಿಚಾರಣೆ ನಡೆಸಿದೆ. ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ, ಉಡುಪಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹಾಜ್ರ ಶಿಫಾ ಅವರ ತಂದೆ ಹೈದರ್‌ ಆಲಿ ಅವರ ಮಲ್ಪೆಯ ಹೊಟೇಲಿಗೆ ಸೋಮವಾರ ರಾತ್ರಿ ಕಲ್ಲೆಸೆಯಲಾಗಿದ್ದು, ಹೊಟೇಲ್‌ ಮಾಲಕರ ಮಗನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.