ಪರಿಸರ ಸಂರಕ್ಷಣೆ: ಕನ್ನಡಪ್ರಭ ವರದಿಗಾರ ವಿನೋದ್ ನಾಯ್ಕ‌ಗೆ ಸನ್ಮಾನ

Jul 14, 2022, 12:35 PM IST

ಮೈಸೂರು(ಜು.14):  ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಕನ್ನಡಪ್ರಭ ಪತ್ರಿಕೆ ವರದಿಗಾರ ವಿನೋದ್ ನಾಯ್ಕ‌ ಅವರನ್ನು ಸನ್ಮಾನಿಸಲಾಯಿತು. ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ನಡೆದ 'ವನಸಿರಿ' ಕಾರ್ಯಕ್ರಮದಲ್ಲಿ ಕನ್ನಡಪ್ರಭ ವರದಿಗಾರ ವಿನೋದ್ ನಾಯ್ಕ‌ ಸೇರಿದಂತೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡುವ ವಿವಿಧ ಗಣ್ಯರನ್ನು ಸನ್ಮಾನಿಸಲಾಯಿತು. 

ರಾಜ್ಯದೆಲ್ಲೆಡೆ ಮಳೆ: ಸ್ಮಾರ್ಟ್‌ ಸಿಟಿ ತುಮಕೂರಲ್ಲಿ ಕುಡಿಯುವ ನೀರಿಗೆ ಬರ..!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜೀವ್ ಸ್ನೇಹ ಬಳಗಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 25 ಸಾವಿರ ಸಸಿ ನೆಡುವ ವನಸಿರಿ ಕಾರ್ಯಕ್ರಮಕ್ಕೆ ಮುನ್ನುಡಿಯಾಗಿ ನಡೆದ ಸಮಾರಂಭಕ್ಕೆ ಸಸಿಗಳಿಗೆ ನೀರೆರೆದು, ಹೊಂಬಾಳೆ ಬಿಡಿಸುವ ಮೂಲಕ ಚಾಲನೆ ನೀಡಲಾಯಿತು. ಸುತ್ತೂರು ಮಠಾಧಿಪತೊ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ನಡೆದ‌ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ, ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ ಟಿ ದೇವೇಗೌಡ, ಎಲ್ ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್  ವಿ ರಾಜೀವ್ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು.