ಹುಬ್ಬಳ್ಳಿಯಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌: ಗಲಭೆಕೋರರಿಗೆ ಕಮಿಷನರ್‌ ಖಡಕ್‌ ಎಚ್ಚರಿಕೆ

Apr 17, 2022, 12:09 PM IST

ಹುಬ್ಬಳ್ಳಿ(ಏ.17):  ಹುಬ್ಬಳ್ಳಿಯಲ್ಲಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಅಂತ ಕಮಿಷನರ್‌ ಲಾಬೂರಾಮ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ 10 ಕೆಎಸ್‌ಆರ್‌ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. ನಿನ್ನೆ ನಡೆದ ಹಿಂಸಾತ್ಮಕ ಘಟನೆಯಲ್ಲಿ ಪೊಲೀಸರು, ಸ್ಥಳೀಯರು ಸೇರಿದಂತೆ 12 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ಪೊಲೀಸ್‌ ವಾಹನಗಳು ಜಖಂಗೊಂಡಿವೆ. ಹೀಗಾಗಿ ಹೊರ ಜಿಲ್ಲೆಗಳಿಂದ ಪೊಲೀಸ್‌ ಪಡೆಗಳು ಆಗಮಿಸಿವೆ. ಮತ್ತೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ.

Hubli Riots: ಗಲಾಟೆಗೆ ಸಂಬಂಧಿಸಿಲ್ಲದವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ: ಕುಟುಂಬಸ್ಥರ ಅಳಲು