Kolar: ಜಿಲ್ಲೆಯಲ್ಲಿ ಚಿನ್ನಕ್ಕಿಂತ ರೇಷ್ಮೆಯೇ ದುಬಾರಿ, ರೈತರ ಮುಖದಲ್ಲಿ ಮಂದಹಾಸ

Kolar: ಜಿಲ್ಲೆಯಲ್ಲಿ ಚಿನ್ನಕ್ಕಿಂತ ರೇಷ್ಮೆಯೇ ದುಬಾರಿ, ರೈತರ ಮುಖದಲ್ಲಿ ಮಂದಹಾಸ

Suvarna News   | Asianet News
Published : Jan 08, 2022, 02:46 PM ISTUpdated : Jan 08, 2022, 03:49 PM IST

ಕೋಲಾರ (Kolar) ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ರೇಷ್ಮೆ ಉತ್ಪಾದನೆ ಕೂಡಾ ತೀವ್ರ ಕುಸಿತಕಂಡಿದೆ. ನಿರಂತರ ಮಳೆಯಿಂದ ರೈತರು ಬೆಳೆದಂತಹ ರೇಷ್ಮೆ  (Silk) ಬೆಳೆ ಹಾಳಾಗಿರೋ ಪರಿಣಾಮ ಮಾರುಕಟ್ಟೆಯಲ್ಲಿ ರೇಷ್ಮೆಗೆ ಬಂಗಾರದ ಬೆಲೆ ಬಂದಿದೆ. 

ಕೋಲಾರ (ಜ. 08):  ಅವಿಭಜಿತ ಕೋಲಾರ (Kolar) ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಗಳಲ್ಲಿ ಇತ್ತೀಚೆಗೆ ಸುರಿದ ನಿರಂತರ ಮಳೆಯ ಪರಿಣಾಮ ರೇಷ್ಮೆ ( Silk) ಬೆಲೆ ದಿಢೀರ್ ಏರಿಕೆ ಕಂಡಿದೆ. ಮಳೆಗೆ ರೇಷ್ಮೆ ಬೆಳೆ ಹಾಳಾಗಿರೋ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆಗೆ ತಕ್ಕಂತೆ ರೇಷ್ಮೆ ಪೂರೈಕೆಯಾಗುತ್ತಿಲ್ಲ.ಇದರ ಪರಿಣಾಮವಾಗಿ ರೇಷ್ಮೆಗೂಡು ಬೆಲೆ ಹೆಚ್ಚಾಗಿದೆ. ಎರಡ್ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ 352 ರೇಷ್ಮೆ ಬೆಳೆಗಾರರು 316 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹಿಪ್ಪು ನೇರಳೆ ಬೆಳೆಗೆ ಹಾನಿಯಾಗಿದೆ. 

ಕೋಲಾರ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ರೇಷ್ಮೆ ಉತ್ಪಾದನೆ ಕೂಡಾ ತೀವ್ರ ಕುಸಿತಕಂಡಿದೆ. ನಿರಂತರ ಮಳೆಯಿಂದ ರೈತರು ಬೆಳೆದಂತಹ ರೇಷ್ಮೆ ಬೆಳೆ ಹಾಳಾಗಿರೋ ಪರಿಣಾಮ ಮಾರುಕಟ್ಟೆಯಲ್ಲಿ ರೇಷ್ಮೆಗೆ ಬಂಗಾರದ ಬೆಲೆ ಬಂದಿದೆ. ಕೋಲಾರದ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಮಿಶ್ರತಳಿ ರೇಷ್ಮೆಗೆ 700 ರುಪಾಯಿ ಇದ್ದರೆ, ಬೈವೋಲ್ಟೀನ್ ಬೆಲೆಯು ಕೆಜಿಗೆ 800 ರುಪಾಯಿ ದಾಟಿದೆ. ಗುಣಮಟ್ಟದ ರೇಷ್ಮೆ ಬೆಳೆ ಬೆಳೆದಿರುವ ರೈತರಿಗೆ ಸುಗ್ಗಿಕಾಲ ಎನ್ನುವಂತಾಗಿದೆ. 

ಕೋಲಾರ ಜಿಲ್ಲೆಯ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಸೊಪ್ಪು ಬೆಳೆಯಲಾಗುತ್ತಿದೆ.19 ಸಾವಿರ ರೈತರು ಜಿಲ್ಲೆಯಲ್ಲಿ ರೇಷ್ಮೆ ಕೃಷಿ ಮಾಡುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ  ರೇಷ್ಮೆ ಗೂಡಿನ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಬೆಲೆ ಏರಿಕೆಗೆ ಚಳಿಗಾಲವು ಕಾರಣವಾಗಿದೆ. ಚಳಿಗಾಲದಲ್ಲಿ ಹಿಪ್ಪುನೇರಳೆ ಉತ್ಪಾದನೆ ಕುಂಠಿತಗೊಂಡ ಪರಿಣಾಮ ರೇಷ್ಮೆಗೂಡು ಉತ್ಪಾದನೆಯೂ ಕಡಿಮೆಯಾಗಿದೆ. 

ಕೋಲಾರದ ರೇಷ್ಮೆ ಮಾರುಕಟ್ಟೆಯಲ್ಲಿ ಪ್ರತಿನಿತ್ಯ 5 ಟನ್ ರೇಷ್ಮೆಗೂಡಿಗೆ ಬೇಡಿಕೆಯಿದೆ. ಆದ್ರೆ, ಚಳಿಗಾಲದ ಜೊತೆಗೆ ಕಳೆದ ತಿಂಗಳ ಮಳೆಯಿಂದಾಗಿ ಹಿಪ್ಪುನೇರಳೆ ಬೆಳೆ ಕೊಳೆತು ಬೆಳೆ ಹಾಳಾಗಿದೆ. ಮಾರುಕಟ್ಟೆಗೆ ನಿತ್ಯ 2 ಟನ್ ಮಾತ್ರ ರೇಷ್ಮೆಗೂಡು ಪೂರೈಕೆಯಾಗುತ್ತಿದೆ.ಇದ್ರಿಂದ ಪ್ರತಿ ಕೆಜಿ ರೇಷ್ಮೆಗೂಡಿಗೆ 700 ರಿಂದ 800 ರೂಪಾಯಿ ಮುಟ್ಟಿದೆ.

 ಅಕ್ಟೋಬರ್ ತಿಂಗಳಲ್ಲಿ ಕೋಲಾರ ರೇಷ್ಮೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಮಿಶ್ರತಳಿ ರೇಷ್ಮೆಗೆ ಬೆಲೆ ಗರಿಷ್ಠ 500-600 ರೂಪಾಯಿಯಿತ್ತು. ಆದ್ರೆ, ನವೆಂಬರ್ ತಿಂಗಳಲ್ಲಿ ಮಳೆಯ ನಂತರ ಒಂದು ಕೆಜಿ ರೇಷ್ಮೆಗೂಡು 700 ರೂಪಾಯಿಗಿಂತ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಬೈವೋಲ್ಟಿನ್ 700 ರಿಂದ 900 ರುಪಾಯಿಗೆ ಮಾರಾಟವಾಗುತ್ತಿದೆ. ಕೊರೊನಾ ಹಾಗೂ ಚೀನಾದಲ್ಲಿಯೂ ಈ ವರ್ಷ ಹೆಚ್ಚು ಮಳೆ ಸುರಿದಿರುವ ಕಾರಣ ಅಲ್ಲಿಂದ ಬರುವ ರೇಷ್ಮೆಯ ಆಮದು ಸಹ ಸ್ಥಗಿತಗೊಂಡಿದೆ. ಚಳಿಗಾಲದಲ್ಲಿ ರೇಷ್ಮೆಗೆ ಸುಣ್ಣಕಟ್ಟು ರೋಗ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣವಾಗಿದೆ. ಬೆಲೆ ಏರಿಕೆಯಿಂದ ರೇಷ್ಮೆ ಬೆಳೆಗಾರರು ಸಂತೋಷ ಪಡುವಂಥ ಸ್ಥಿತಿ ಇಲ್ಲ. ಅದೃಷ್ಟವಿದ್ದವರಿಗೆ ಮಾತ್ರ ಬೆಲೆ ಏರಿಕೆಯ ಲಾಭ ಎನ್ನುವಂತಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more