Mar 21, 2022, 9:54 AM IST
ಹಾವೇರಿ (ಮಾ. 21): ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಪಾರ್ಥಿವ ಶರೀರ ಸೋಮವಾರ ಸ್ವಗ್ರಾಮ ರಾಣಿಬೆನ್ನೂರು ತಾಲೂಕು ಚಳಗೇರಿಗೆ ತಲುಪಿದೆ. ನವೀನ್ ಪಾರ್ಥಿವ ಶರೀರವನ್ನು ವೀರಶೈವ ಲಿಂಗಾಯದ ಸಂಪ್ರದಾಯದಂತೆ ಪೂಜೆ ನೆರವೇರಿಸಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ..ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು ಸುಮಾರು 200 ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: 21 ದಿನಗಳ ನಂತರ ತಾಯ್ನಾಡಿಗೆ ಬಂದ ನವೀನ್ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ
ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆ ವೇಳೆ ನವೀನ್ ಪಾರ್ಥಿವ ಶರೀರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ವಿಭಾಗದಲ್ಲಿ ಪಾರ್ಥಿವ ಶರೀರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಹಸ್ತಾಂತರಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಇತರರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು