ಗಣರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅಪಮಾನ: ಕಾಲಿನಿಂದ ತಿರಂಗಾ ಎತ್ತಿದ ಭೂಪ

Jan 26, 2020, 11:39 AM IST

ಬೆಳಗಾವಿ(ಜ. 24): ಗಣರಾಜ್ಯೋತ್ಸವ ದಿನದಂದೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು(ಭಾನುವಾರ) ನಡೆದಿದೆ. ನಗರದ ಕೋಟೆಕೆರೆ ಆವರಣದಲ್ಲಿರುವ ಧ್ವಜಸ್ತಂಭದಲ್ಲಿ 110  ಮೀಟರ್ ಉದ್ದದ ರಾಷ್ಟ್ರಧ್ವಜ ಹಾರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.  

ರಾಷ್ಟ್ರ ಧ್ವಜವನ್ನ ಹಗ್ಗದಂತೆ ಬಳಸಿದ ಅಗ್ನಿಶಾಮಕ ಸಿಬ್ಬಂದಿ ಕಾಲಿನಿಂದ ರಾಷ್ಟ್ರಧ್ವಜ ಮೇಲೆರಿದ್ದಾರೆ. ಗಣರಾಜ್ಯೋತ್ಸವ ದಿನದಂದು ತಾಂತ್ರಿಕ ದೋಷ ಸರಿಪಡಿಸಿಕೊಳ್ಳದ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ರಾಷ್ಟ್ರದ ಎರಡನೇ ಅತಿ ಎತ್ತರದ ಧ್ವಜಸ್ತಂಭವಾಗಿದೆ.