ಬಾಗಲಕೋಟೆ: ಐತಿಹಾಸಿಕ ಪಟ್ಟದಕಲ್ಲನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ

Jun 21, 2022, 2:23 PM IST

ಬಾಗಲಕೋಟೆ(ಜೂ.21):  ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್‌ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್‌, ಸಂಸದ ಗದ್ದಿಗೌಡರ್‌ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಗಣ್ಯರು ಸೇರಿದಂತೆ ವಿವಿಧ ಅಧಿಕಾರಿಗಳು ಯೋಗಾಸನ ಮಾಡಿದ್ದಾರೆ.  

ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಯೋಗ ದಿನ ಕಾರ್ಯಕ್ರಮ ಯಶಸ್ವಿ