ಹೊಸ ವರ್ಷಕ್ಕೆ ರಾಜ್ಯ ಸರ್ಕಾರವು ಗೈಡ್‌ಲೈನ್ಸ್ ಹೊರಡಿಸಿದ್ದು, ರಾತ್ರಿ 1 ಗಂಟೆಯವರೆಗೆ ಮಾತ್ರ ಹೊಸ ವರ್ಷದ ಸಂಭ್ರಮ ಇರಲಿದೆ.
ಕೋವಿಡ್ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ನಿಬಂಧನೆಗಳನ್ನು ಜಾರಿಗೊಳಿಸಿದೆ. ಇಂದಿನಿಂದ ಅನ್ವಯವಾಗುವಂತೆ, ಶಾಲಾ-ಕಾಲೇಜುಗಳು, ಮಾಲ್‌ಗಳು ಮತ್ತು ಚಿತ್ರಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಲ್ಲದೆ ಹೊಸ ವರ್ಷಾಚರಣೆಗೂ ಕೆಲ ನಿಯಮಗಳನ್ನು ರೂಪಿಸಿದೆ. ಹೊಸ ವರ್ಷಾಚರಣೆ ಹತ್ತಿರ ಬರುತ್ತಿದ್ದು, ಜನರು ಸಂಭ್ರಮದಿಂದ ಹೊಸ ಕ್ಯಾಲೆಂಡರ್ ವರ್ಷದ ಸ್ವಾಗತಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಹೀಗಾಗಿ ಹೊಸ ವರ್ಷಾಚರಣೆಗೂ ಮುಂಚಿತವಾಗಿ, ರಾಜ್ಯ ಸರ್ಕಾರವು ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಸ್ಕ್‌ಗಳನ್ನು ಕಡ್ಡಾಯಗೊಳಿಸಿದೆ. ಈ ನಿಟ್ಟಿನಲ್ಲಿ ಮಧ್ಯರಾತ್ರಿಯ ಭಾರಿ ಸಂಭ್ರಮಕ್ಕೆ ಸಣ್ಣ ಬ್ರೇಕ್ ಹಾಕಲಾಗಿದೆ. ಹೊಸ ವರ್ಷಾಚರಣೆಯ ರಾತ್ರಿಯ ಸಂಭ್ರಮಕ್ಕೆ ಸರ್ಕಾರ ಬ್ರೇಕ್ ಹಾಕಿದ್ದು, ರಾತ್ರಿ 1 ಗಂಟೆಯ ಬಳಿಕ ಎಂ.ಜಿ ರಸ್ತೆಯಲ್ಲಿ ಯಾರೂ ಇರಬಾರದು. ರೆಸ್ಟೋರೆಂಟ್ ಸಿಬ್ಬಂದಿಗೆ ಎರಡು ಡೋಸ್ ಕಡ್ಡಾಯ ಹಾಗೂ ಹೊಸ ವರ್ಷಕ್ಕೆ ರೆಸ್ಟೋರೆಂಟ್'ಗಳು 1 ಗಂಟೆಗೆ ಕ್ಲೋಸ್ ಮಾಡಬೇಕು. ಪಾರ್ಟಿಗಳಿಗೆ ಗರ್ಭಿಣಿ ಹಾಗೂ ಮಕ್ಕಳು ಭಾಗವಹಿಸುವಂತಿಲ್ಲ ಎಂಬ ನಿಯಮ ತರಲಾಗಿದೆ.
1996-97ನೇ ಎಸ್ಸೆಸ್ಸೆಲ್ಸಿ ಬ್ಯಾಚಿನ ಬೆಳ್ಳಿಹಬ್ಬ, ಗುರುವಂದನೆ ಮತ್ತು ಸ್ನೇಹ ಸಂಗಮ