ಹಂಪಿಯ ಕಂಪಭೂಪ ಮಾರ್ಗ ಬಂದ್ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.
ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.
ಹಂಪಿಯ ಕಂಪಭೂಪ ಮಾರ್ಗ ಬಂದ್ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.
ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.
ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.