Jan 3, 2025, 10:02 AM IST
ತುಮಕೂರು(ಜ.03): ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಅಡುಗೆ ಸಹಾಯಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಡುಗೆ ಸಹಾಯಕಿಯನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಣ ಇಲಾಖೆ ವಿರುದ್ಧ ಗಾಯಗೊಂಡ ಅಡುಗೆ ಸಹಾಯಕಿ ಉಮಾದೇವಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಮಹಿಳೆಯರಿಗ ಉಚಿತ ಗ್ಯಾರೆಂಟಿ, ಪುರುಷರ ಮೇಲೆ 15 ಪರ್ಸೆಂಟ್ ಟಿಕೆಟ್ ದರ ಹೆಚ್ಚಳ