ರಾತ್ರಿಯೇ 10 ಬಿಜೆಪಿ ಕಾರ್ಯಕರ್ತರನ್ನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಪೊಲೀಸರು. ಸುದ್ದಿ ಇಳಿದು ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್, ಬೋಪಯ್ಯ ದೌಡು
ಕೊಡಗು(ಆ.19): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ, ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 10 10 ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾತ್ರಿಯೇ 10 ಬಿಜೆಪಿ ಕಾರ್ಯಕರ್ತರನ್ನ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದೆ. ಸುದ್ದಿ ಇಳಿದು ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್, ಬೋಪಯ್ಯ ಅವರು ದೌಡಾಯಿಸಿದ್ದಾರೆ. ಶಾಸಕ ಅಪ್ಪಚ್ಚು ರಂಜನ್ ಕಾರ್ಯಕರ್ತರಿಗೆ ಜಾಮೀನು ಕೊಡಿಸಿದ್ದಾರೆ. ಕುಶಾಲನಗರ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದರು.
ಕೊಡಗಿನಲ್ಲಿ ಮೊಟ್ಟೆ ಎಸೆತ ಘಟನೆ ಖಂಡಿಸಿ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ!