ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!

Published : Mar 14, 2025, 12:19 PM ISTUpdated : Mar 14, 2025, 12:56 PM IST

ಮಂಡ್ಯದಲ್ಲಿ ಪ್ರೀತಿ, ಮೋಸದಿಂದ ಮನನೊಂದು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರನಿಂದ ಮೋಸ ಹೋದ ಮಗಳು ಆತ್ಮಹತ್ಯೆ ಮಾಡಿಕೊಂಡರೆ, ಆಕೆಯ ಸಾವಿಗೆ ನ್ಯಾಯ ಸಿಗದ ಕಾರಣ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಕ್ಕರೆನಾಡು ಮಂಡ್ಯದಲ್ಲೊಂದು ಮನಕಲಕುವ ಘಟನೆ ನಡೆದಿದೆ. ಲವ್,ಸೆಕ್ಸ್,ದೋಖಾಗೆ ಒಂದೇ ಕುಟುಂಬದ ಇಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. 20 ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡಿದ್ದ ವಿಜಯಲಕ್ಷ್ಮಿ(21) ಪುತ್ರಿ ಸಾವಿನ ಬೆನ್ನಲ್ಲೇ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
 
ಪಕ್ಕದ ಮಾರಸಿಂಗನಹಳ್ಳಿಯ ಹರಿಕೃಷ್ಣ ಎಂಬಾತನಿಂದ ಮೋಸದ ಆರೋಪ ಕೇಳಿಬಂದಿದ್ದು, ವಿಜಯಲಕ್ಷ್ಮೀ-ಹರಿಕೃಷ್ಣ ನಡುವೆ ಪರಸ್ಪರ ಪ್ರೀತಿಯಾಗಿದೆ. ಪ್ರೀತಿಸುವ ನೆಪದಲ್ಲಿ ಕಳೆದ ಒಂದೂವರೆ ವರ್ಷದಿಂದ ಇಬ್ಬರ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಇತ್ತೀಚೆಗೆ ಬೇರೆ ಹುಡುಗಿಯರ ಜೊತೆ ಹರಿಕೃಷ್ಣ ಸಂಪರ್ಕದಲ್ಲಿದ್ದ. ಈ ಬಗ್ಗೆ ಪ್ರಶ್ನಿಸಿ ವಿಜಯಲಕ್ಷ್ಮಿ ಮದುವೆಗೆ ಪಟ್ಟು ಹಿಡಿದಿದ್ದಳು. ಆದರೆ ಮದುವೆಗೆ ನಿರಾಕರಿಸಿ ಹರಿಕೃಷ್ಣ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಸಿದ್ದ. ಇದರಿಂದ  ಮನನೊಂದು ವಿಜಯಲಕ್ಷ್ಮಿ ಸೂಸೈಡ್  ಮಾಡಿಕೊಂಡಿದ್ದಳು.

ಇದು ಮಂಡ್ಯ ಪೊಲೀಸರೇ ಮಾಡಿದ ಕೊಲೆ; ಮಗಳ 'ಸೂಸೈಡ್‌' ಕೇಸ್‌ಗೆ ಸಿಗದ ನ್ಯಾಯ, ತಾಯಿಯ ಆತ್ಮಹತ್ಯೆ!

ವಿಜಯಲಕ್ಷ್ಮಿ ಸಾವಿಗೆ ನ್ಯಾಯಕ್ಕಾಗಿ ಮಂಡ್ಯ ಗ್ರಾಮಾಂತರ ಠಾಣೆಗೆ ತಂದೆ ನಂಜುಂಡೇಗೌಡ ದೂರು ನೀಡಿದ್ದರು. ದೂರು ಕೊಟ್ಟು ನ್ಯಾಯ ಕೋರಲು ಹೋದವರ ಮೇಲೆಯೇ ಪೊಲೀಸರು  FIR ದಾಖಲಿಸಿದ್ದರು. ಇತ್ತ ಮಗಳ ಸಾವಿಗೆ ನ್ಯಾಯವೂ ಇಲ್ಲ, ನಮ್ಮ ಪರ ಬಂದವರಿಗೆ ನೆಮ್ಮದಿಯೂ ಇಲ್ಲ ಎಂದು ನೊಂದಿದ್ದ ತಾಯಿ  ಲಕ್ಷ್ಮಿ ನಿನ್ನೆ ಸಂಜೆ ಮನೆಯಲ್ಲೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ನಟಿ ರನ್ಯಾ ಚಿನ್ನ ಪ್ರಕರಣ: ಬಂಧಿತ ಆಪ್ತ ಸ್ನೇಹಿತ ತರುಣ್‌ ತೆಲುಗು ನಟ, ಅಲ್ಲಿ ಹೆಸರು ಬೇರೆ!
  
ಇದೀಗ ಗ್ರಾಮಸ್ಥರ ಆಕ್ರೋಶದ ಬೆನ್ನಲ್ಲೇ ಕೊನೆಗೂ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದೀಗ ಹರಿಕೃಷ್ಣ ಸೇರಿ 19 ಮಂದಿ ವಿರುದ್ಧ  189, 191, 64, 108, 54, 118, ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್‌  ದಾಖಲು ಮಾಡಿದ್ದರು.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more