Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Published : Mar 19, 2022, 11:46 AM IST

*ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂ!
*ಅಮಲಿನಲ್ಲಿ ಲಾಂಗ್‌ ಹಿಡಿದು ಪುಂಡರ ಅಟ್ಟಹಾಸ..!
*ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ
 

ಬೆಂಗಳೂರು (ಮಾ. 19): ನಗರದಲ್ಲಿ ಕಿಡಿಗೇಡಿಗಳು ಅಟ್ಟಹಾಸ ನಡೆಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ರಾತ್ರಿ ಮಾರಕಾಸ್ತ್ರಗಳಿಂದ ಒಡೆದು ಜಖಂಗೊಳಿಸಿದ್ದಾರೆ. ಪುಂಡರ ಹಾವಳಿಗೆ ಗೋವಿಂದರಾಜ ನಗರದ (Govindraj Nagar) ಜನ ಬೆಚ್ಚಿ ಬಿದ್ದಿದ್ದಾರೆ. ಅಮಲಿನಲ್ಲಿದ್ದ ಪುಂಡರು ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದಾರೆ.  ಒಂದೇ ರಾತ್ರಿಯಲ್ಲಿ30ಕ್ಕೂ ಹೆಚ್ಚು ಆಟೋ ಹಾಗೂ ಕಾರಿನ ಗ್ಸಾಸ್‌ಗಳನ್ನು ಪುಂಡರು ಪುಡಿ ಮಾಡಿದ್ದಾರೆ.  ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ಪುಂಡರು ರಸ್ತೆ ಪಕ್ಕ ನಿಲ್ಲಿಸದ್ದ ವಾಹನಗಳನ್ನು ಹಾನಿಗೊಳಿಸಿದ್ದಾರೆ. 

ಇದನ್ನೂ ಓದಿ: Bengaluru Crime: ವಿಮಾನದಲ್ಲಿ ಬೆಂಗ್ಳೂರಿಗೆ ಬಂದು ಕಳ್ಳತನ: ನಾಲ್ವರ ಬಂಧನ

ಕಾಮಾಕ್ಷಿಪಾಳ್ಯ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಾಹನಗಳ ಗಾಜು ಪುಡಿ ಮಾಡಿದ ಯುವಕರಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ. ಬೆಂಗಳೂರಿನಲ್ಲಿ ಪದೇ ಪದೇ ಇಂಥಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಹಿಂದೆ ಕೂಡ ಮಹಾಲಕ್ಷ್ಮಿಲೇಔಟ್‌, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ದುಷ್ಕರ್ಮಿಗಳು ವಾಹನಗಳ ಗಾಜು ಪುಡಿ ಮಾಡಿದ ಘಟನೆಗಳು ಬೆಳಕಿಗೆ ಬಂದಿವೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more