ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

ಕಲಬುರಗಿ; ಊರಿನ ಪ್ರೀತಿಗೆ ಪಾತ್ರವಾಗಿದ್ದ ಮಂಗನಿಗೆ ಸಂಪ್ರದಾಯ ಅಂತ್ಯಸಂಸ್ಕಾರ

Published : Sep 23, 2021, 09:49 PM ISTUpdated : Sep 23, 2021, 10:04 PM IST

* ಊರಿನ ಪ್ರೀತಿಗೆ ಪಾತ್ರವಾಗಿದ್ದ ವಾಣರನಿಗೆ ಅಂತ್ಯಕ್ರಿಯೆ
* ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ
* ಬೀದಿ ನಾಯಿಗಳ ದಾಳಿಗೆ ಸಿಕ್ಕಿ ಪ್ರಾಣ ಕಳೆದುಕೊಂಡ ಮಂಗ

ಕಲಬುರಗಿ (ಸೆ. 23)  ಕೋವಿಡ್ ನಂತ್ರ ಸಮಾಜದಲ್ಲಿನ ಹಲವು ಆಚರಣೆ, ಪದ್ದತಿಗಳು ಬದಲಾಗಿವೆ.. ಬಂಧು, ಮಿತ್ರರು ಅಗಲಿದರೂ ಅವರ ಅಂತ್ಯಕ್ರಿಯೆಗೂ ಹೋಗದೇ ವಾಟ್ಸಪನಲ್ಲಿ RIP ಅಂತ ಸಂದೇಶ ಕಳುಹಿಸುವ ಪರಿಸ್ಥಿತಿ ಸೃಷ್ಟಿಯಾಗಿದೆ.  ಆದ್ರೆ ಇಲ್ಲಿ, ಮನುಷ್ಯ ಅಲ್ಲ, ಮಂಗ ಸತ್ರೂ ಗ್ರಾಮಸ್ಥರೆಲ್ಲಾ ಸೇರಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಮರೆಯಾದ ಮಾವುತನಿಗೆ ಗಜರಾಜನ ಕಣ್ಣೀರ ವಿದಾಯ

ಮಂಗನ ಶವಕ್ಕೆ ಸ್ನಾನ ಮಾಡಿಸಿ, ಹೊಸ ಬಟ್ಟೆ, ಕಿರಿಟ ತೊಡಿಸಿ, ಸಂಪ್ರದಾಯಬದ್ದವಾಗಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.. ಅಷ್ಟೇ ಅಲ್ಲ, ಗ್ರಾಮಸ್ಥರೆಲ್ಲರಿಗೆ ಪ್ರಸಾದ ವ್ಯವಸ್ಥೆ ಸಹ ಮಾಡಿ ಮಂಗನ ಮೇಲೆ ಭಕ್ತಿ ಭಾವ ಮೆರೆದಿದ್ದಾರೆ.‌ ಈ ಮಂಗ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮಸ್ಥರೊಂದಿಗೆ ಕಳೆದ ಕೆಲ ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿತ್ತು.. ಗ್ರಾಮದ ಇತರೇ ಸಾಕು ಪ್ರಾಣಿಗಳಂತೆ ಎಲ್ಲೆಡೆ ಸುತ್ತಾಡುತ್ತಾ ಎಲ್ಲರ ಪ್ರೀತಿಗೆ ಪಾತ್ರವಾಗಿತ್ತು.. ಆದ್ರೆ ನಿನ್ನೆ ಬೀದಿನಾಯಿಗಳ ದಾಳಿಯಿಂದ ಮಂಗ ಪ್ರಾಣ ಕಳೆದುಕೊಂಡಾಗ ಅರಳಗುಂಡಗಿ ಗ್ರಾಮಸ್ಥರು ಕಣ್ಣಿರಿನೊಂದಿಗೆ ಈ ರೀತಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಮಾದರಿಯಾಗಿದ್ದಾರೆ.

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?