Dharwad: 14 ಜೀವಗಳನ್ನ ಬಲಿ ಪಡೆದ ಅಪಘಾತಕ್ಕೆ ಒಂದು ವರ್ಷ: ಕಿಲ್ಲರ್ ರಸ್ತೆಯಿಂದ ಮುಕ್ತಿ ಯಾವಾಗ?

Dharwad: 14 ಜೀವಗಳನ್ನ ಬಲಿ ಪಡೆದ ಅಪಘಾತಕ್ಕೆ ಒಂದು ವರ್ಷ: ಕಿಲ್ಲರ್ ರಸ್ತೆಯಿಂದ ಮುಕ್ತಿ ಯಾವಾಗ?

Suvarna News   | Asianet News
Published : Jan 20, 2022, 12:44 PM IST

*   ಹುಬ್ಬಳ್ಳಿ-ಧಾರವಾಡ ಬೈಪಾಸ್‌ನ ಇಟ್ಟಿಗಟ್ಟಿ ಗ್ರಾಮದ ಬಳಿ ನಡೆದಿದ್ದ ಅವಘಡ
*   ದುರ್ಘಟನೆ ಬಳಿಕ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡ
*   ಒಂದು ವರ್ಷವಾದರೂ ಟೆಂಡರ್ ಪ್ರಕ್ರಿಯೆ ಬಿಟ್ಟರೆ ಮತ್ತೇನೂ ನಡೆದೇ ಇಲ್ಲ 
 

ಧಾರವಾಡ(ಜ.20): ಕಳೆದ ವರ್ಷ ಧಾರವಾಡ ಜಿಲ್ಲೆಯ ಇತಿಹಾಸದಲ್ಲಿಯೇ ಅತಿ ದೊಡ್ಡ ಅಪಘಾತ ನಡೆದು ಹೋಗಿತ್ತು. ಹುಬ್ಬಳ್ಳಿ-ಧಾರವಾಡ ಬೈಪಾಸ್‌ನ ಇಟ್ಟಿಗಟ್ಟಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾಗಿ 4 ರಲ್ಲಿ ಟೆಂಪೋ ಟ್ರಾವೆಲ್‌ಗೆ ಟಿಪ್ಪರ್‌ವೊಂದು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ದಾವಣಗೆರೆ ಮೂಲದ 13 ಮಹಿಳೆಯರು ಹಾಗೂ ಚಾಲಕ ಅಸುನೀಗಿದ್ದರು. ಆ ಘಟನೆ ನಡೆದು ಇಂದಿಗೆ ಬರೋಬ್ಬರಿ ಒಂದು ವರ್ಷ. ಘಟನೆ ನಡೆದು ಒಂದು ವರ್ಷವಾದರೂ ಇಂದಿಗೂ ಆ ಅಪಘಾತ ಯಾರ ಮನಸ್ಸಿನಿಂದಲೂ ಮರೆಯಾಗಿಲ್ಲ. 

ಮೊದಲಿನಿಂದಲೂ ಬೈಪಾಸ್ ರಸ್ತೆಯಲ್ಲಿ ಇಂತಹ ದುರ್ಘಟನೆಗಳು ನಡೆದರೂ ಅತೀ ಹೆಚ್ಚಿನ ಸಾವು-ನೋವು ಕಂಡ ಘಟನೆ ಇದಾಗಿದ್ದರಿಂದ ಈ ರಸ್ತೆಯ ಅಗಲೀಕರಣಕ್ಕೆ ಸಾಕಷ್ಟು ಒತ್ತಡ ಕೇಳಿ ಬಂದಿತ್ತು. ಆದರೆ ಅದಾಗಿ ಒಂದು ವರ್ಷವಾದರೂ ಇದುವರೆಗೂ ಟೆಂಡರ್ ಪ್ರಕ್ರಿಯೆ ಬಿಟ್ಟರೆ ಮತ್ತೇನೂ ನಡೆದೇ ಇಲ್ಲ ಅನ್ನೋದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Belagavi: ಕೋವಿಡ್‌ ರೂಲ್ಸ್‌ ಬ್ರೇಕ್‌: ಬಿಜೆಪಿ ಶಾಸಕ ಅನಿಲ್‌ ಬೆನಕೆ ವಿರುದ್ಧ FIR

ಈ ಘಟನೆ ಬರೀ ರಾಜ್ಯವಲ್ಲದೇ ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಅಪಘಾತದಲ್ಲಿ ಅಸುನೀಗಿದವರ ಆತ್ಮಕ್ಕೆ ಶಾಂತಿ ಕೋರಿದ್ದರು. ಈ ಘಟನೆ ನಡೆದ ಬಳಿಕ ಈ ರಸ್ತೆಯನ್ನು ಅಗಲೀಕರಣ ಮಾಡಬೇಕು ಅನ್ನೋ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿತ್ತು. ಈ ರಸ್ತೆಯನ್ನು ನಂದಿ ಇನ್ಫ್ರಾಸ್ಟಕ್ಟರ್ ಕಂಪನಿ ನಿರ್ಮಿಸಿ, ನಿರ್ವಹಣೆ ಮಾಡುತ್ತಿದೆ. 2024 ರ ಮೇ ತಿಂಗಳವರೆಗೆ ಅವರೇ ನಿರ್ವಹಣೆ ಮಾಡಬೇಕಿದೆ. ಆದರೆ ಆ ಕಂಪನಿಗೆ ಅಗಲೀಕರಣ ಮಾಡಲು ಇಷ್ಟವಿಲ್ಲದಿದ್ದಕ್ಕೆ ಈ ಸಮಸ್ಯೆ ಇಂದಿಗೂ ಮುಂದುವರೆಯುತ್ತಲೇ ಇದೆ. 

ಇನ್ನು ಈ ಒಂದು ವರ್ಷದ ಅವಧಿಯಲ್ಲಿ ಮತ್ತೆ ಅನೇಕ ಅಪಘಾತಗಳು ಆಗಿದ್ದು, ಹತ್ತಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇದೀಗ ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ರಸ್ತೆ ಅಗಲೀಕರಣಕ್ಕೆ ಮನಸ್ಸು ಮಾಡಿದ್ದು, ಆರು ಪಥಗಳನ್ನಾಗಿ ಅಭಿವೃದ್ಧಿ ಪಡಿಸಲು ನಿರ್ಧರಿಸಿವೆ. ಆದರೆ, ಇನ್ನೂ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಟೆಂಡರ್ ಪ್ರಕ್ರಿಯೆ ಇದೀಗ ಜಾರಿಯಲ್ಲಿದ್ದು, ಇವೆಲ್ಲಾ ಮುಗಿಯೋದಕ್ಕೆ ಎಷ್ಟು ದಿನಗಳು ಬೇಕೋ ಏನೋ ಅನ್ನೋದು ಜನರ ಪ್ರಶ್ನೆಯಾಗಿದೆ.
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more