Oct 16, 2020, 12:39 PM IST
ಬೆಂಗಳೂರು (ಅ. 16): ಯಾದಗಿರಿಯಲ್ಲಿ ಮಳೆ ಇನ್ನೂ ನಿಂತಿಲ್ಲ. ಭೀಮಾ ನದಿ ಪ್ರವಾಹದಿಂದ ಹುರಸಗುಂಡಗಿ ಗ್ರಾಮ ಸಂಪೂರ್ಣ ಮುಳುಗಿದೆ. ಪ್ರವಾಹದಲ್ಲಿ ಸಿಲುಕಿದವರನ್ನು ತೆಪ್ಪದಲ್ಲಿ ಕರೆದುಕೊಂಡು ಬಂದು ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗುತ್ತಿದೆ. ಈ ಗ್ರಾಮದಲ್ಲಿ 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಆರ್ಎಸ್ಎಸ್ ಹಾಗೂ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.