Mar 22, 2020, 11:40 AM IST
ಬೆಳಗಾವಿ[ಮಾ.22]: ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಸಮರ ಸಾರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು[ಭಾನುವಾರ] ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಪ್ರಧಾನಿ ಮೋದಿ ಅವರ ಕರೆಗೆ ಕುಂದಾನಗರಿ ಬೆಳಗಾವಿಯಲ್ಲಿ ಭರ್ಜರಿ ಬೆಂಬಲ ವ್ಯೆಕ್ತವಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ.
PUC ಪರೀಕ್ಷೆ ಮುಂದೂಡಿಕೆ ಇಲ್ಲ; ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಪ್ರತಿದಿನ ಇಲ್ಲಿಂದ ಸಾವಿರಾರು ಸಂಖ್ಯೆಯಲ್ಲಿ ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಇಂದು ಜನತಾ ಕರ್ಫ್ಯೂ ಹಿನ್ನೆಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಕಾರ್ಯಾಚರಣೆಗಿಳಿದಿಲ್ಲ. ಇನ್ನು ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಹೀಗಾಗಿ ಜನ ಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ.