ರಾಷ್ಟ್ರಧ್ವಜ ಹಿಡಿದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದಾಗ ವಾಗ್ವಾದ ನಡೆದಿದೆ.
ಬೀದರ್ (ಜೂ. 13): ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ ಬಿಜೆಪಿ ಮಾಜಿ ವಕ್ತಾರ ನೂಪುರ್ ಶರ್ಮಾ ಬಂಧನಕ್ಕೆ ಆಹಗ್ರಹಿಸಿ ಬೀದರ್ ನಗರದ ಓಲ್ಡ್ ಸಿಟಿಯ ಚೌಕ್‌ನಲ್ಲಿ ಪ್ರತಿಭಟನೆ ನಡೆದಿದೆ. ರಾಷ್ಟ್ರಧ್ವಜ ಹಿಡಿದು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿದಾಗ ವಾಗ್ವಾದ ನಡೆದಿದೆ. ಇನ್ನು ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್ ಕುಮಾರ್ ಜಿಂದಾಲ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಳೆದ ಶುಕ್ರವಾರದ ನಮಾಜ್ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿದ್ದವು. ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದೇವೇಳೆ ಬೆಳಗಾವಿಯಲ್ಲಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಇದನ್ನೂ ಓದಿ: ಪ್ರವಾದಿ ವಿವಾದ: ಬಂಗಾಳದಲ್ಲಿ ಮತ್ತೆ ಹಿಂಸಾಚಾರ!