NPR, NCR, CAA ವಿರುದ್ಧ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ: ಕೇಂದ್ರದ ವಿರುದ್ಧ ಆಕ್ರೋಶ

Feb 1, 2020, 3:30 PM IST

ಕೊಪ್ಪಳ(ಫೆ.01): ಎನ್‌ಪಿಆರ್‌, ಎನ್‌ಆರ್‌ಸಿ, ಸಿಎಎ ವಿರುದ್ಧ ಮುಸ್ಲಿಂ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳಿಂದ  ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಕೊಪ್ಪಳ ನಗರದ ನಡೆದ ಪ್ರತಿಭಟನೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. 

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನ ಕೂಗಿದರು. ಸಂಜೆವರೆಗೂ ಉಪವಾಸ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಮುಸ್ಲಿಂ ಮಹಿಳೆಯರೂ ಕೂಡ  ಭಾಗಿಯಾಗುವ ಮೂಲಕ ಈ ಕಾಯ್ದೆಯನ್ನ ವಿರೋಧಿಸಿದ್ದಾರೆ. ಈ ಕಾಯ್ದೆಗಳ ರದ್ದತಿಗೆ ಆಗ್ರಹಿಸಿದ್ದಾರೆ.