Jul 31, 2020, 5:23 PM IST
ಚಿಕ್ಕಮಗಳೂರು(ಜು.31): ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಯ ಭೀತಿಯಿಂದ ಹೊರಬರುವಷ್ಟರಲ್ಲೇ ಕೊರೋನಾ ಸೋಂಕು ವಕ್ಕರಿಸಿತ್ತು. ಇದರ ಬೆನ್ನಲ್ಲೇ ಮತ್ತೊಂದು ಶಾಕ್ ಮಲೆನಾಡಿನ ಮಂದಿಗೆ ಎದುರಾಗಿದೆ.
ಹೌದು, ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಇದೀಗ ಇಲಿ ಜ್ವರದ ಭೀತಿ ಎದುರಾಗಿದೆ. ತಾಲೂಕಿನ ಇಬ್ಬರಲ್ಲಿ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲಿ ಜ್ವರದಿಂದಲೇ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಕೋವಿಡ್ ನೆಗೆಟಿವ್ ಬಂದ್ರೂ ಚಿಕಿತ್ಸೆ ನೀಡಲು ಹಿಂದೇಟು: ಶವ ಸಮೇತ ಡಿಸಿ ಕಚೇರಿಗೆ ಬಂದ ಬಂಧುಗಳು
ಸಾಮಾನ್ಯವಾಗಿ ಡಿಸೆಂಬರ್‌ನಿಂದ ಮೇ ವೇಳೆಯಲ್ಲಿ ಇಲಿ ಜ್ವರ ಕಾಣಿಸಿಕೊಳ್ಳುತ್ತದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಶಂಕಿತರಿಂದ ರಕ್ತದ ಮಾದರಿ ಸಂಗ್ರಹಿಸಿ ಶಿವಮೊಗ್ಗ ಇಲ್ಲವೇ ಉಡುಪಿ ಲ್ಯಾಬ್‌ಗಳಿಗೆ ಕಳಿಸಿ ಆ ಬಳಿಕವಷ್ಟೇ ಖಚಿತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.