Mar 24, 2022, 10:18 PM IST
ಬೇಲೂರು (ಮಾ.24): ಏಪ್ರಿಲ್‌ನಲ್ಲಿ ನಡೆಯಲಿರುವ ಬೇಲೂರಿನ ಚನ್ನಕೇಶವ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ಹಿಂದೂಯೇತರರಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡದಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಹಿಂದೂ ಸಂಘಟನೆ ಮುಖಂಡ ಸಂತೋಷ್ ಕೆಂಚಾಂಬ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ
ಏ.5ರಿಂದ 18 ರವರೆಗೆ ನಡೆಯುವ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ವಹಿವಾಟು ನಡೆಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು. ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ಆದೇಶ ವಿರೋಧಿಸಿ ರಾಜ್ಯದಾದ್ಯಂತ ಮುಸ್ಲಿಮರು ಅಂಗಡಿ ಬಂದ್ ಮಾಡಿದ್ದರು. ಆದ್ದರಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನ, ಜಾತ್ರಾ ಮಹೋತ್ಸವ, ರಥೋತ್ಸವ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅವರಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರು ತಿಳಿಸಿದರು.