ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more