ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರ ತಡೆ

Aug 15, 2021, 3:15 PM IST

ಮಂಗಳೂರು (ಆ.15): ಸ್ವಾತಂತ್ರ್ಯ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರ ತಡೆಯೊಡ್ಡಿದ ಘಟನೆ ಕಬಕ ಗ್ರಾಮಪಂಚಾಯತ್ನಲ್ಲಿ ನಡೆದಿದೆ. ರಥದಲ್ಲಿ ವೀರ ಸಾವರ್ಕರ್ ಫೋಟೋ ಅಳವಡಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಾವರ್ಕರ್ ಫೋಟೋ ತೆಗೆದು ಟಿಪ್ಪು ಸುಲ್ತಾನ್ ಫೋಟೋ ಹಾಕುವಂತೆ ಒತ್ತಡ ಹೇರಲಾಗಿದೆ. 

Independence Day: ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ, ಸಿಎಂ ಭಾಷಣದ ಪ್ರಮುಖ ಅಂಶಗಳಿವು

ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ವಿವಾದವು ತಲುಪಿದೆ. ಸ್ಥಳಕ್ಕೆ ಪುತ್ತೂರು ನಗರ ಪೋಲೀಸರು ಭೇಟಿ ನೀಡಿ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು  ಚದುರಿಸಿದರು