Sep 11, 2021, 4:53 PM IST
ಶಿವಮೊಗ್ಗ (ಸೆ. 11): ನೂರಾರು ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಣ ಹೋಮ ನಡೆಸಿದ ಅಮಾನವೀಯ ಘಟನೆ ಇದೀಗ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಭದ್ರಾವತಿ ತಾಲೂಕಿನ ಸಿಂಗನಮನೆ ಜಿಪಂ ವ್ಯಾಪ್ತಿಯ, ಕಂಬದಾಳು - ಹೊಸೂರು ಗ್ರಾಮ ಪಂಚಾಯತ್‌ನ ರಂಗನಾಥಪುರದಲ್ಲಿ ನಾಯಿಗಳನ್ನು ಜೀವಂತವಾಗಿ ಹೂತಿಟ್ಟು ಮಾರಣ ಹೋಮಕ್ಕೆ ಕಾರಣವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಪುನಃ ಅವುಗಳನ್ನು ವಾಸಿಸುತ್ತಿದ್ದ ಸ್ಥಳದಲ್ಲಿಯೇ ಬಿಡಲಾಗುತ್ತದೆ. ಈ ಸಂಬಂಧ ಗ್ರಾಮ ಪಂಚಾಯತ್ ವತಿಯಿಂದ ಟೆಂಡರ್ ನೀಡಲಾಗಿತ್ತು. ಟೆಂಡರ್‌ದಾರರು ಶಸ್ತ್ರಚಿಕಿತ್ಸೆ ಹಣ ಉಳಿಸುವ ಉದ್ದೇಶದಿಂದ ಈ ರೀತಿಯ ಕೃತ್ಯ ನಡೆಸಿರಬಹುದೆಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.