ಇಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ವಿಶೇಷತೆ ಏನು ಗೊತ್ತಾ?

Feb 27, 2023, 10:02 AM IST

ಇಂದು ಮಲೆನಾಡ ಹೆಬ್ಬಾಲಿನಲ್ಲಿ ನಿರ್ಮಾಣವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ  ಉದ್ಘಾಟನೆ ಆಗುತ್ತಿದೆ. ರಾಜ್ಯದ 2ನೇ ಅತಿ ದೊಡ್ಡ ಏರ್‌ ಪೋರ್ಟ್‌ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್‌ಪೋರ್ಟ್‌, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ. 449.2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್‌ ವೇ ಹೊಂದಿದ್ದು, ಎಟಿಆರ್‌ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್‌ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್‌ ಟರ್ಮಿನಲ್‌ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್‌ ಉದ್ದದ ಕಾಂಪೌಂಡ್‌ ಇದೆ.