* ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಡೆದ ಘಟನೆ
* ಹತ್ತಿ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ
* ಸೊಲ್ಲಾಪುರದಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ
ವಿಜಯಪುರ(ಮಾ.10): ಹತ್ತಿ ತುಂಬಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಿನ್ನೆ(ಬುಧವಾರ) ರಾತ್ರಿ ನಡೆದಿದೆ. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಧಗಧಗನೆ ಹೊತ್ತಿ ಉರಿದಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಬೆಂಗಳೂರಿಗೆ ಲಾರಿ ಹೊರಟಿತ್ತು ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿ ಬಿಟ್ಟು ಇಳಿದು ಚಾಲಕ ಬಚಾವಾಗಿದ್ದಾನೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹ ಪಟ್ಟಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗೋವಾದಲ್ಲಿ ಬಿಜೆಪಿಯದ್ದೇ ಸರ್ಕಾರ, ಡಿಕೆಶಿ, ಜಾರಕಿಹೋಳಿ ಏನೂ ಮಾಡೋಕೆ ಆಗಲ್ಲ: ಸಿಟಿ ರವಿ