Aug 29, 2022, 11:57 AM IST
ತುಮಕೂರು ಜಿಲ್ಲೆಯಲ್ಲಿ ಒಂದೆರೆಡು ದಿವಸ ಬಿಡುವು ಕೊಟ್ಟಿದ್ದ ಮಳೆರಾಯ ಮತ್ತೆ ಆರ್ಭಟಿಸುತ್ತಿದ್ದಾನೆ ಮಳೆಯಿಂದಾಗಿ ಆಟದ ಮೈದಾನಗಳು ಕೆಸರಿನ ಗದ್ದೆಯಾಗಿ ಬದಲಾಗಿದೆ. ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಂಬಿ ಹರಿಯುವ ನೀರಿನಲ್ಲಿ ಬೈಕ್ ಸವಾರನೊಬ್ಬ ಹುಚ್ಚಾಟ ಮಾಡಿ ಬೈಕ್ ಸಮೇತ ಕೊಚ್ಚಿ ಹೋಗಿದ್ದಾನೆ. ತಕ್ಷಣ ಜಾಗೃತರಾದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ.