Feb 8, 2022, 12:28 PM IST
ಉಡುಪಿ (ಫೆ. 08): ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್-ಕೇಸರಿ ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ. ಈ ಮಧ್ಯೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪೇಟಾ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಮತ್ತೊಂದೆಡೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂಸಿದ್ದಾರೆ. ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಈ ಮಧ್ಯೆ ಈಗ ಕೇಸರಿ ಪೇಟಾ ಈಗ ಕಾಲೇಜಿಗೆ ಎಂಟ್ರಿ ನೀಡಿದೆ.
ಇದನ್ನೂ ಓದಿ: Hijab Row: ಹಿಜಾಬ್ ನನ್ನ ಹಕ್ಕು, ಆದರೆ ಶಾಲೆ, ಕಾಲೇಜಿನ ಒಳಗೆ ಬೇಡ: ಮುಸ್ಲಿಂ ವಕ್ತಾರೆ
ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದಾರೆ. ಇದರ ನಡುವೆಯೇ ಹಿಜಾಬ್ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ (High Court) ಮುಂದೆ ಬರಲಿದೆ.
ಹಿಜಾಬ್ ಪರ, ವಿರೋಧ ಪ್ರತಿಭಟನೆ ಮಧ್ಯೆ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.