ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

ಪೂಜೆ ವೇಳೆ ಅಲುಗಾಡುತ್ತೆ 16 ಅಡಿಯ ಹುತ್ತ ..ಕಾಫಿನಾಡಲ್ಲೊಂದು ವಿಸ್ಮಯ ಉತ್ಸವ..!

Published : Nov 28, 2023, 11:16 AM IST

ಈ ಊರಿನ ಜಾತ್ರೆ ವಿಸ್ಮಯಕಾರಿ.. ಹುತ್ತದ ಸುತ್ತಲೂ ಕಲ್ಲು -ಸಿಮೆಂಟ್‌ಗಳಿಂದ ಬಂದೋಬಸ್ತ್ ಮಾಡಿದ್ರು ಹುಣ್ಣೆಮೆ ದಿನ ಅಲುಗಾಡುತ್ತದೆ. 4 ಶತಕಗಳ ಇತಿಹಾಸಕ್ಕೆ ಇದು ಸಾಕ್ಷಿಯಾಗಿದೆ.

ಪ್ರಕೃತಿಯ ವೈಚಿತ್ರ್ಯವೇ ಹಾಗೆ ಭೂಗರ್ಭದ ಒಡಲಾಳದ ಅದೆಷ್ಟೋ ಸತ್ಯಗಳಿಗೆ ಕಾರಣ ಸಿಗಲ್ಲ. ಪ್ರಕೃತಿಯ ವಿಚಿತ್ರವನ್ನ ಕಂಡು ಮೂಕವಿಸ್ಮಿತವಾಗಬೇಕು. ಅಂತಹದ್ದೆ ಘಟನೆಗೆ ಚಿಕ್ಕಮಗಳೂರು(Chikkamagaluru) ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಉಣ್ಣಕ್ಕಿ ಉತ್ಸವ ಸಾಕ್ಷಿಯಾಗಿದೆ. ದನ ಕಾಯೋ ಹುಡುಗರು ಕಟ್ಟಿದ ಮಣ್ಣಿನ ಗೂಡು ಇಂದು ಸಾವಿರಾರು ಭಕ್ತರ ಇಷ್ಟದೈವವಾಗಿದೆ. ಹೊಯ್ಸಳರ ಕಾಲದಿಂದಲೂ ನಡೆದು ಬರುತ್ತಿರುವ ಆಚರಣೆಗೆ 400 ವರ್ಷಗಳ ಇತಿಹಾಸವಿದೆ. ಪ್ರತಿ ವರ್ಷ ದೀಪಾವಳಿ ಅಮಾವಸ್ಯೆಯ( Diwali Amavasya) ನಂತರದ ಹುಣ್ಣೆಮೆಯಂದು ಉಣ್ಣಕ್ಕಿ ಉತ್ಸವ(Unnakki Utsav) ನಡೆಯುತ್ತೆ. ಈ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಹುತ್ತ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡಲಿದೆ.ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿಯ ಗುಡಿ.400 ವರ್ಷಗಳ ಹಿಂದೆ  ಚಿಕ್ಕದ್ದಿದ್ದ ಗೂಡು ಇಂದು 16 ಅಡಿಗೂ ಎತ್ತರಕ್ಕೆ ಬೆಳೆದಿದೆ. ಈ ಹುತ್ತ ಮಳೆ-ಗಾಳಿಗೆ ಕರಗಿಲ್ಲ.  ವರ್ಷಪೂರ್ತಿ ಮಣ್ಣಿನ ಗೊಂಬೆಯಂತೆ ನಿಂತ ಹುತ್ತ ವರ್ಷಕ್ಕೊಮ್ಮೆ ಭಕ್ತರನ್ನ ಮೂಕವಿಸ್ಮಿತರನ್ನಾಗಿಸುತ್ತೆ. ಈ ಪವಾಡವನ್ನ ನೋಡಲೆಂದು ಬಂದವರು ನಾಗಪ್ಪನ ಭಕ್ತರಾಗಿ ಪ್ರತಿ ವರ್ಷ ಬರ್ತಿದ್ದಾರೆ. 

ಉತ್ಸವದಂದು ಯಾವುದೇ ಗಾಯವಾಗದ ಕರುವಿನ ಕಿವಿಯನ್ನ ಕತ್ತರಿಸಿ ದೇವರ ಕರುವೆಂದು ಕಾಡಿಗೆ ಬಿಡ್ತಾರೆ. ಇದರಿಂದ ಊರಿನ ದನಕರುಗಳು ಆರೋಗ್ಯದಿಂದಿದ್ದು, ಯಾವುದೇ ಅನಾಹುತಗಳು ನಡೆಯೋದಿಲ್ಲ ಅನ್ನೋದು ಭಕ್ತರ ನಂಬಿಕೆ. ದನ ಕಾಯೋ ಹುಡುಗರು ಕಟ್ಟಿದ ಹುತ್ತವಾದ್ರಿಂದ ಕರುವನ್ನ ಕಾಡಿಗೆ ಹೊಡೆಯೋ ಆಚರಣೆ ಬೆಳೆದು ಬಂದಿದೆ. ಉತ್ಸವದ ದಿನ ಕರುವನ್ನ ಹುತ್ತಕ್ಕೆ ಸುತ್ತಿಸುವ ವೇಳೆ ಕರುವಿನ ಮೇಲೆ ಮಂಡಕ್ಕಿ ಹಾಕ್ತೇವೆಂದು ಹರಕೆ ಕಟ್ಟಿಕೊಂಡ್ರೆ ಎಂತಹಾ ಕಷ್ಟವಾದ್ರೂ ನಿವಾರಣೆಯಾಗುತ್ತಂತೆ. ಪ್ರತಿವರ್ಷ ದೀಪಾವಳಿಯ ನಂತರದ ಮಕ್ಕಳ ಹುಣ್ಣಿಮೆಯ ಗುರುವಾರ ಅಥವಾ ಭಾನುವಾರದ ತಡರಾತ್ರಿ ಈ ಉತ್ಸವ ನಡೆಯಲಿದೆ. ಚರ್ಮರೋಗ, ಮಕ್ಕಳಾಗದವರು, ದನಕರು ಸಾಯ್ತಿದ್ರೆ ಅಥವಾ ಆರೋಗ್ಯ ಹದಗೆಟ್ತಿದ್ರೆ ಹರಕೆ ಕಟ್ಟಿಕೊಳ್ಳಲಿದ್ದಾರೆ. ಇಲ್ಲಿಗೆ ಹರಕೆ ಕಟ್ಟಿಕೊಂಡರೇ ವರ್ಷದೊಳಗೆ ಆ ಹರಕೆ ಈಡೇರುತ್ತಂತೆ.

ಇದನ್ನೂ ವೀಕ್ಷಿಸಿ:  ಮಂತ್ರಾಲಯದಲ್ಲಿ ತುಂಗಾರತಿ & ತೆಪ್ಪೋತ್ಸವ ಸಂಭ್ರಮ..ಲಕ್ಷಾಂತರ ಭಕ್ತರಿಂದ ತುಂಬಿ ತುಳುಕಿದ ರಾಯರ ಮಠ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more