Uttara Kannada: ಬೈತ್‌ಖೋಲಾದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

Uttara Kannada: ಬೈತ್‌ಖೋಲಾದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

Published : Apr 21, 2022, 01:57 PM ISTUpdated : Apr 21, 2022, 02:59 PM IST

ಕೆರೆಯಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸುವುದು ಸಾಮಾನ್ಯ. ಬಲೆ, ಕೂಣಿ ಮೂಲಕ ಕೆರೆಯಲ್ಲಿ ಬೆಳೆಸಲಾದ ಮೀನುಗಳನ್ನು ಬೇಟೆಯಾಡಲಾಗುತ್ತದೆ. ಆದ್ರೆ, ಇಲ್ಲೊಂದು ಕಡೆ ಇದೇ ಮೊದಲ ಬಾರಿಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು

ಕಾರವಾರ (ಏ.21): ಕೆರೆಯಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸುವುದು ಸಾಮಾನ್ಯ. ಬಲೆ, ಕೂಣಿ ಮೂಲಕ ಕೆರೆಯಲ್ಲಿ ಬೆಳೆಸಲಾದ ಮೀನುಗಳನ್ನು ಬೇಟೆಯಾಡಲಾಗುತ್ತದೆ. ಆದ್ರೆ, ಇಲ್ಲೊಂದು ಕಡೆ ಇದೇ ಮೊದಲ ಬಾರಿಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿವಿಧೆಡೆಯಿಂದ ಆಗಮಿಸಿದ್ದ ಸ್ಪರ್ಧಾಳುಗಳು ತಮ್ಮದೇ ಶೈಲಿಯಲ್ಲಿ ಗಾಳ ಹಾಕುವ ಕಲೆಯನ್ನ ಪ್ರದರ್ಶಿಸಿದರು‌.

 

ಈ ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಉತ್ತರಕನ್ನಡ ಜಿಲ್ಲೆಯ ಕಾರವಾರದ ಬೈತ್‌ಖೋಲಾದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ‌ಬೈತ್‌ಖೋಲಾದ ಮೀನುಗಾರಿಕಾ ಬಂದರು ಪ್ರದೇಶದಲ್ಲಿರುವ ಅಲೆತಡೆಗೋಡೆ ಬಳಿ ಯುವ ಮೀನುಗಾರರ ಸಂಘರ್ಷ ಸಮಿತಿ ಈ ಸ್ಪರ್ಧೆಯನ್ನ ಆಯೋಜಿಸಿತ್ತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಖುದ್ದು ಗಾಳ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು ವಿಶೇಷವಾಗಿತ್ತು. 

ಆಧುನಿಕ ಮಾದರಿಯ ಆ್ಯಂಗ್ಲಿಂಗ್ ಹಾಗೂ ಸಾಂಪ್ರದಾಯಿಕ ಮಾದರಿಯ ಕೈಗಾಳ ಹಾಕುವ ವಿಧಾನದಲ್ಲೂ ಸಹ ಜಿಲ್ಲಾಧಿಕಾರಿ ಗಾಳ ಹಾಕಿ ಮೀನು ಹಿಡಿಯಲು ಯತ್ನಿಸಿದರು. ಗಾಳ ಹಾಕುವುದು ಸಾಂಪ್ರದಾಯಿಕವಾಗಿ ಮೀನು ಹಿಡಿಯುವ ಒಂದು ಪದ್ದತಿಯಾಗಿದ್ದು ಸಾಕಷ್ಟು ಮಂದಿ ಇದನ್ನು ಹವ್ಯಾಸವಾಗಿಯೂ ಮಾಡಿಕೊಂಡು ಬರುತ್ತಾರೆ. ಹೀಗಾಗಿ ಈ ಗಾಳ ಹಾಕುವಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹದ್ದೊಂದು ಸ್ಪರ್ಧೆ ಆಯೋಜಿಸಿರುವುದು ಒಂದು ಹೊಸ ಪ್ರಯತ್ನವಾಗಿದೆ.

ಇನ್ನು ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಗೆ ಉತ್ತರಕನ್ನಡ ಜಿಲ್ಲೆಯಿಂದ ಮಾತ್ರವಲ್ಲದೇ ಹುಬ್ಬಳ್ಳಿ ಸೇರಿ ವಿವಿಧ ಜಿಲ್ಲೆಗಳಿಂದ 50ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು. ರೇಡಿಯಂ ಹಾಗೂ ಕೈ ಗಾಳ ಹೀಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಕೆಲವರು ಸಣ್ಣಪುಟ್ಟ ಮೀನುಗಳನ್ನು ಹಿಡಿದು ಖುಷಿ ಪಟ್ರೆ, ಇನ್ನೂ ಕೆಲವರು ಸುಮಾರು 2 ಕೆ.ಜಿಗೂ ಹೆಚ್ಚು ತೂಕದ ಬೃಹತ್ ಮೀನುಗಳನ್ನು ಹಿಡಿಯುವಲ್ಲಿ ಸಫಲರಾದರು. ಸ್ಪರ್ಧೆಯಲ್ಲಿ ಅತೀ ಹೆಚ್ಚು ಮೀನು ಹಿಡಿದವರನ್ನು ವಿಜೇತರೆಂದು ಘೋಷಣೆ ಮಾಡಲಾಯಿತು. ಹೆಚ್ಚು ತೂಕದ ಮೀನು ಹಿಡಿದವರಿಗೂ ಪ್ರತ್ಯೇಕ ಪ್ರಶಸ್ತಿಯನ್ನು ನೀಡಲಾಯಿತು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more