ತುಮಕೂರಿನ ಗೊರವನಹಳ್ಳಿಯ ಮಹಾಲಕ್ಷ್ಮಿದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಮುಂಜಾನೆಯಿಂದಾಲೇ ಭಕ್ತಾದಿಗಳು ದೇವಸ್ಥಾನದತ್ತ ಮುಖ ಮಾಡಿದ್ದಾರೆ.
ತುಮಕೂರು(ಜು.31): ನಾಡಿನಾದ್ಯಂತ ಇಂದು ಸಡಗರ ಸಂಭ್ರಮದಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಕೊರೋನಾ ಆತಂಕದ ನಡುವೆಯೂ ಭಕ್ತರು ವರವ ಕೊಡೆ ಎಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಮೊರೆ ಹೋಗುತ್ತಿದ್ದಾರೆ.
ತುಮಕೂರಿನ ಗೊರವನಹಳ್ಳಿಯ ಮಹಾಲಕ್ಷ್ಮಿದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನಡೆಸಲಾಗುತ್ತಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಮುಂಜಾನೆಯಿಂದಾಲೇ ಭಕ್ತಾದಿಗಳು ದೇವಸ್ಥಾನದತ್ತ ಮುಖ ಮಾಡಿದ್ದಾರೆ.
ಪ್ರತಿವರ್ಷ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೋನಾ ಆತಂಕ ಇದ್ದಿದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ಹಬ್ಬದ ಆಚರಣೆ ನಡೆಯುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.