ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

ಅಂಬೇಡ್ಕರ್‌ಗೆ ಅಮಿತ್‌ ಶಾ ಅವಮಾನ: ದಲಿತ ಸಂಘಟನೆಗಳಿಂದ ಪ್ರತಿಭಟನೆ, ವಿಜಯಪುರ ಬಂದ್!

Published : Dec 30, 2024, 08:28 PM IST

ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿಜಯಪುರದಲ್ಲಿ ಬಂದ್ ಆಚರಿಸಲಾಗಿದೆ. ದಲಿತ, ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಿಜಯಪುರ (ಡಿ.30): ಗೃಹ ಸಚಿವ ಅಮಿತ್ ಶಾ ಅವರು ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಹಾಗೂ ದಲಿತ ಪರ ಸಂಘಟನೆಗಳಿಂದ ವಿಜಯಪುರ ಜಿಲ್ಲಾ ಬಂದ್ ಮಾಡಲಾಗಿದೆ. ವಿಜಯಪುರ ನಗರ ಬಂದ್‌ಗೆ 50ಕ್ಕೂ ಅಧಿಕ ಸಂಘಟನೆಗಳಿಂದ ಬೆಂಬಲ ನೀಡಲಾಗಿತ್ತು.

ದಲಿತ, ಪ್ರಗತಿಪರ, ಕನ್ನಡಪರ, ರೈತ ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡಿದ್ದರಿಂದ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಡಿಡಿಪಿಐ, ಡಿಡಿಪಿಯು ರಿಂದ ಶಾಲಾ‌ಕಾಲೇಜು ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಇತ್ತ ಮದ್ಯ ಮಾರಾಟ ಸಂಗ್ರಹಕ್ಕೂ ಜಿಲ್ಲಾಡಳಿತ ನಿಷೇಧ ಹೇರಿದೆ. ನಿನ್ನೆ ಮದ್ಯರಾತ್ರಿಯಿಂದ ಇಂದು ಮದ್ಯರಾತ್ರಿಯವರೆಗೂ ಮದ್ಯ ಮಾರಾಟ ಮಾಡುವಂತಿಲ್ಲ. ಹೊಸ ವರ್ಷಾಚರಣೆಗೆ ರೆಡಿಯಾಗ್ತಿದ್ದವರಿಗೆ ಬಂದ್ ಶಾಕ್ ನೀಡಿದೆ. ಡಿ.31 ಬೆಳಗಿನಜಾವದವರೆಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.

ಇನ್ನು ನಗರದಾದ್ಯಂತ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್‌ ಮಾಡುವಂತೆ ಕಾಂಗ್ರೆಸ್ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದವು. ಕಳೆದ ಡಿ.28ರಂದು ಬಂದ್ ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದಿಂದ ಬಂದ್ ಮುಂದೂಡಲಾಗಿತ್ತು. ಹೀಗಾಗಿ, ಎಲ್ಲ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿವೆ. ಬಂದ್ ಹಿನ್ನೆಲೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆಯನ್ನೂ ನೀಡಲಾಗಿತ್ತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more