Mar 20, 2023, 9:11 AM IST
ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಇನ್ನು ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಹಾಗೆ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡುತ್ತಿರುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಸ್ವಾಭಿಮಾನಿ ಒಕ್ಕಲಿಗ ಸಮುದಾಯ ಸುಳ್ಳುಗಳಿಗೆ ಮಾರುಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸುಳ್ಳು ಪ್ರಚಾರದ ಮೂಲಕ ಒಕ್ಕಲಿಗರನ್ನು ಅವಮಾನಿಸುವ ಕುತಂತ್ರದ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಸರ್ಕಾರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.