Apr 17, 2022, 3:56 PM IST
ವಿಜಯನಗರ (ಏ. 17): ಹುಬ್ಬಳ್ಳಿ ಗಲಾಟೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ್ ಕಟೀಲ್ (Nalin Kumar Kateel) ಆಕ್ರೋಶ ವ್ಯಕ್ತಪಡಿಸಿದ್ದು ಮತಾಂದ ಶಕ್ತಿಗಳು ಭಯದ ವಾತಾವರಣ ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. "ಸಣ್ಣ ಸಣ್ಣ ವಿಷಯಕ್ಕೆ ಬೆಂಕಿ ಹಚ್ಚುವ ಕೆಲಸ ಆಗ್ತಾ ಇದೆ, ಸಣ್ಣ ಘಟನೆಗಳನ್ನು ದೊಡ್ಡದಾಗಿ ಮಾಡುತ್ತಿದ್ದಾರೆ" ಎಂದು ನಳೀನ್ ಹೇಳಿದ್ದಾರೆ. ಘಟನೆ ಹಿಂದಿನ ಷಡ್ಯಂತ್ರದ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿರುವ ನಳೀನ್ ರಾಜ್ಯದಲ್ಲಿ ಗುಜರಾತ್, ಉತ್ತರ ಪ್ರದೇಶ ಮಾದರಿ ಕಾನೂನು ಜಾರಿ ಗೊಳಿಸಿವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ
ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ತೀವ್ರ ಹಿಂಸಾಚಾರ ನಡೆದಿದೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ತೆಗೆಗುಕೊಳ್ಳಲಾಗುವುದು ಎಂದು ಮಿಷನರ್ ಲಾಬೂರಾಮ್ ಖಡಕ್ ಎಚ್ಚರಿಕೆ ನೀಡಿದ್ದಾರೆ