ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

ನಾಲ್ಕು ತಾಸು ಕಾದರೂ ನಿಲ್ಲಿಸದ ಬಸ್‌: ಬೇಸರದಿಂದ ಕಲ್ಲೆಸೆದ ಮಹಿಳೆ..!

Published : Jun 26, 2023, 11:58 AM ISTUpdated : Jun 26, 2023, 12:06 PM IST

ಸುಮಾರು ನಾಲ್ಕು ತಾಸಿನಿಂದ ಬಸ್‌ಗೆ ಕಾಯುತಿದ್ದೆ. ಬಸ್‌ಗಳು ನಿಲ್ಲಿಸುವಂತೆ ಕೈ ಮಾಡಿದರೂ ನಿಲ್ಲಸದಿದ್ದಕ್ಕೆ ಬೇಸರವಾಗಿ ಕಲ್ಲೆಸೆದೆ ಎಂದು ಮಹಿಳೆ ಹೇಳಿದ್ದಾರೆ.

ಕೊಪ್ಪಳ: ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಯಾದ ನಂತರ ಹಲವು ರೀತಿಯ ಅವಘಡಗಳು ನಡೆಯುತ್ತಿವೆ. ಬಸ್ ನಿಲ್ಲಿಸದ ಹಿನ್ನೆಲೆ ಕಾದು ಕಾದು ಸುಸ್ತಾಗಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲು ಹೊಡ್ದ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯಲ್ಲೊಂದಾದ  ಶಕ್ತಿ ಯೋಜನೆ ಜಾರಿಯಾದ  ಎಫೆಕ್ಟ್ ನಿಂದಾಗಿ ಈಗ ಜನರ ಆಕ್ರೋಶ ವ್ಯಕ್ತವಾಗುತ್ತಿದೆ. ನಾಲ್ಕು ತಾಸು ಕಾಯ್ದರು ಬಸ್ ನಿಲ್ಲಿಸದ ಹಿನ್ನಲೆಯಲ್ಲಿ ಮಹಿಳೆಯೊಬ್ಬರು ಬಸ್‌ಗೆ ಕಲ್ಲೆಸೆದಿದ್ದಾರೆ. ಕೊಪ್ಪಳದಿಂದ-ಹೊಸಪೇಟೆಗೆ ಹೊರಟಿದ್ದ ನಾನ್ ಸ್ಟಾಪ್ ಬಸ್ ಗೆ ಕಲ್ಲೆಸೆದಿದ್ದು, ಬೇಜಾರಿನಿಂದಾಗಿ ತಲೆಕೆಟ್ಟಂತಾಗಿ ಕಲ್ಲು ಎಸೆದೆ ಎಂದು ಮಹಿಳೆ ಹೇಳಿದ್ದಾರೆ. ಇದರಿಂದಾಗಿ ಬಸ್ ಗಾಜು ಪುಡಿಪುಡಿಯಾಗಿದೆ.ಕಲ್ಲು ಎಸೆದ ಹಿನ್ನೆಲೆ ಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ  ಪ್ಯಾಸೆಂಜರ್ ಸಮೇತ ಬಸ್ ನ್ನು ಮುನಿರಾಬಾದ್  ಪೊಲೀಸ್ ಠಾಣೆಗೆ ತಂದಿದ್ದಾರೆ.ಪಾಪಿನಾಯಕಹಳ್ಳಿಯ ಲಕ್ಷ್ಮಿ ಹಾಗೂ ಆಕೆಯೊಂದಿಗೆ ಇನ್ನೋರ್ವ ಮಹಿಳೆ ಭಾನುವಾರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಲಕ್ಷ್ಮಿ ತನ್ನ ತವರು ಮನೆ  ಇಲಕಲ್ ಗೆ ಹೋಗಬೇಕಾಗಿತ್ತು. ಇದರಿಂದಾಗಿ ಹೊಸಲಿಂಗಾಪುರ ಬಳಿ ಬಸ್‌ಗೆ ಕಾಯುತ್ತಿದ್ದರು.

ಇದನ್ನೂ ವೀಕ್ಷಿಸಿ: ಸಭೆಯಲ್ಲಿ ಸ್ವಪಕ್ಷ ನಾಯಕರ ವಿರುದ್ಧ ಆಕ್ರೋಶ: ವೇದಿಕೆಯಲ್ಲೇ ಬಿಜೆಪಿ ದಿಗ್ಗಜರ ಕೌಂಟರ್‌ ವಾರ್‌

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more