ಬೆಂಗಳೂರಿನ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನ ಪ್ರವೇಶಿಸದಂತೆ ಮಹಿಳೆಗೆ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ.
ಬೆಂಗಳೂರಿನ ಅಮೃತಹಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯ ಜುಟ್ಟು ಹಿಡಿದು ಧರಧರನೆ ಎಳೆದೊಯ್ದು, ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಹೇಮಾವತಿ ಎಂಬಾಕೆ ಮೇಲೆ ದೇವಸ್ಥಾನದ ಧರ್ಮದರ್ಶಿ ಮುನಿಕೃಷ್ಣ ಎಂಬಾತ ಇಂತಹ ಹೀನ ಕೃತ್ಯ ಎಸಗಿದ್ದಾನೆ. ದೇವರ ದರ್ಶನಕ್ಕೆ ಅವಕಾಶ ಕೊಡದೇ ರಾಡ್‌ನಿಂದ ಹಲ್ಲೆ ಮಾಡಲಾಗಿದೆ. ಡಿಸೆಂಬರ್ 21ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮಹಿಳೆ ಸ್ನಾನ ಮಾಡಿಲ್ಲ ಎಂಬ ನೆಪ ಒಡ್ಡಿ ಹಲ್ಲೆ ಮಾಡಲಾಗಿದೆ.